ಕೊರೊನ ವೈರಸ್ ಭೀತಿ: ಜಿಲ್ಲಾ ವೈದ್ಯಾಧಿಕಾರಿ ಡಾ.ರಾಮಕೃಷ್ಣ ಹೇಳೋದಿಷ್ಟು! - Medical Officer Dr. Ramakrishna Reaction
🎬 Watch Now: Feature Video
ಕೊರೊನ ವೈರಸ್ ಸೋಂಕು ಹೈದರಾಬಾದ್ನಲ್ಲಿ ಕಾಣಿಸಿಕೊಂಡಿದ್ದು, ರಾಜ್ಯದ ಗಡಿ ಕೆಲ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಇತ್ತ ಹೈದರಾಬಾದ್ಗೆ ಹೊಂದಿಕೊಂಡಿರುವ ಗಡಿ ರಾಯಚೂರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ರಾಯಚೂರು ತಾಲೂಕಿನ ಗಡಿ ಗ್ರಾಮಗಳಾದ ಶಕ್ತಿನಗರ, ಸಿಂಗನೋಡಿ ಚೇಕ್ ಪೋಸ್ಟ್‌ಗಳಲ್ಲಿ ತಪಾಸಣೆ ಮಾಡಲು ವೈದ್ಯರ ತಂಡ ನಿಯೋಜನೆ ಮಾಡಲು ತಿರ್ಮಾನಿಸಲಾಗಿದೆ. ಕೊರೊನ ವೈರಸ್ ಭೀತಿ ಹಿನ್ನೆಲೆ ಜಿಲ್ಲಾ ಆರೋಗ್ಯ ಇಲಾಖೆ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗಿದೆ. ಈ ಕುರಿತಂತೆ ಜಿಲ್ಲಾ ವೈದ್ಯಾಧಿಕಾರಿ ಡಾ.ರಾಮಕೃಷ್ಣ ಈಟಿವಿ ಭಾರತಗೆ ಮಾಹಿತಿ ನೀಡಿದ್ದಾರೆ.