ಬೋನಿಗೆ ಬಿತ್ತು ಭಯ ಸೃಷ್ಟಿಸಿದ ಚಿರತೆ: ನಿಟ್ಟುಸಿರು ಬಿಟ್ಟ ಜನ - ಮೈಸೂರು ಚಿರತೆ ಸೆರೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5127086-thumbnail-3x2-lek.jpg)
ಮೈಸೂರು: ಬೆಮಲ್ ಕಾರ್ಖಾನೆ ಅವರಣದಲ್ಲಿ ಆಗಾಗ ಕಾಣಿಸಿಕೊಂಡು ನೌಕರರಿಗೆ ಹಾಗೂ ಸುತ್ತಮುತ್ತಲ ಬಡಾವಣೆ ನಿವಾಸಿಗಳಿಗೆ ಆತಂಕವನ್ನುಂಟು ಮಾಡುತ್ತಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ರಾತ್ರಿ ಹಾಗೂ ಮುಂಜಾನೆ ವೇಳೆ ಕಾಣಿಸಿಕೊಳ್ಳುತ್ತಿದ್ದ ಚಿರತೆ ನೌಕಕರಿಗೆ ಹಾಗೂ ವಾಯುವಿಹಾರಿಗಳಿಗೆ ಭಯದ ವಾತಾವರಣ ಸೃಷ್ಟಿಸಿತ್ತು. ಚಿರತೆ ಸೆರೆ ಹಿಡಿಯುವಂತೆ ಅಧಿಕಾರಿಗಳಿಗೆ ಮನವಿ ಸಹ ಮಾಡಲಾಗಿತ್ತು. ಈ ಹಿನ್ನೆಲೆ ಬೋನ್ ಇಡಲಾಗಿತ್ತು. ಆಹಾರ ಅರಸಿ ಬಂದ ಚಿರತೆ ಬೊನಿಗೆ ಬಿದ್ದು ಘರ್ಜಿಸುತ್ತಿದ್ದ ಶಬ್ಧ ಕೇಳಿದ ನೌಕರರರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ವಲಯ ಅರಣ್ಯಾಧಿಕಾರಿ ದೇವರಾಜ್ ನೇತೃತ್ವದ ತಂಡ ಚಿರತೆಯನ್ನು ರಕ್ಷಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ.