ಕೊಬ್ಬರಿಗೆ ಬೆಂಬಲ ಬೆಲೆ ನೀಡಲು ಆಗ್ರಹಿಸಿ ಮಾಜಿ ಸಂಸದ ಮುದ್ದಹನುಮೇಗೌಡ ಪ್ರತಿಭಟನೆ - ಮಾಜಿ ಸಂಸದ ಮುದ್ದಹನುಮೇಗೌಡ ಆಗ್ರಹ.
🎬 Watch Now: Feature Video

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಜೆಟ್ನಲ್ಲಿ ತುಮಕೂರು ಜಿಲ್ಲೆಯಲ್ಲಿ ತೆಂಗು ಆಧಾರಿತ ಕೈಗಾರಿಕಾ ಪಾರ್ಕ್ ಘೋಷಣೆ ಮಾಡಿದ್ದಾರೆ. ಆದರೆ ಇದು ತೆಂಗು ಬೆಳೆಗಾರರ ಹಿತಾಸಕ್ತಿಯನ್ನು ಕಾಪಾಡುವುದಿಲ್ಲ. ಬದಲಾಗಿ ಕೊಬ್ಬರಿಗೆ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿ ಮಾಜಿ ಸಂಸದ ಮುದ್ದಹನುಮೇಗೌಡ ಪ್ರತಿಭಟನೆ ನಡೆಸಿದ್ದಾರೆ.