ಶಿವಮೊಗ್ಗದಲ್ಲಿ ಲಾಕ್ಡೌನ್ಗೆ ಉತ್ತಮ ಪ್ರತಿಕ್ರಿಯೆ: ಅನಗತ್ಯವಾಗಿ ಹೊರಬಂದ ವಾಹನ ಸವಾರರಿಗೆ ಖಾಕಿ ಶಾಕ್ - ಶಿವಮೊಗ್ಗ ಲಾಕ್ಡೌನ್ಗೆ ಉತ್ತಮ ಪ್ರತಿಕ್ರಿಯೆ
🎬 Watch Now: Feature Video

ಶಿವಮೊಗ್ಗ: ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುವ ಮೂಲಕ ಇಂದಿನಿಂದ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡಿ ಆದೇಶ ಹೊರಡಿಸಿದೆ. ಹಾಗಾಗಿ ಶಿವಮೊಗ್ಗದಲ್ಲೂ ಸಹ ಲಾಕ್ಡೌನ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿ ಅಂಗಡಿ, ಮುಂಗಟ್ಟುಗಳು ಸಂಪೂರ್ಣವಾಗಿ ಬಂದ್ ಆಗಿವೆ. ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆ ಸಂಚಾರವನ್ನು ಸಂಪೂರ್ಣ ಸ್ಥಗಿತ ಮಾಡಲಾಗಿದೆ. ಅಲ್ಲದೆ, ಅನಗತ್ಯವಾಗಿ ಓಡಾಡುವ ವಾಹನಗಳನ್ನು ಸೀಜ್ ಮಾಡುವ ಮೂಲಕ ಸವಾರರಿಗೆ ಪೊಲೀಸರು ಶಾಕ್ ನೀಡಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಲೈವ್ ವರದಿ ಇಲ್ಲಿದೆ ನೋಡಿ.