ಮಂಗಳೂರಲ್ಲಿ ಸರ್ಕಾರಿ ನೌಕರರಿಗೆ ಕ್ರೀಡಾಕೂಟ
🎬 Watch Now: Feature Video
ಮಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಇಂದು ನಗರದ ಮಂಗಳಾ ಕ್ರೀಡಾಂಗಣದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ ನಡೆಯಿತು. ರಾಜ್ಯ ಸರ್ಕಾರದ ಕಾಯಂ ನೌಕರರಿಗಾಗಿ ಈ ಕ್ರೀಡಾಕೂಟ ಆಯೋಜನೆಗೊಂಡಿದೆ. ಈ ಕ್ರೀಡಾಕೂಟದಲ್ಲಿ ವಿಜೇತರಾದವರು ಇದೇ ತಿಂಗಳು ಧಾರವಾಡದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕ ವಿಭಾಗಗಳಲ್ಲಿ ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿತ್ತು.