ಕಲಬುರಗಿಯಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ಥವ್ಯಸ್ತ - kalburgi Rain news
🎬 Watch Now: Feature Video
ಕಲಬುರಗಿ ನಗರದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ನಿರಂತರ ಮಳೆಯಿಂದಾಗಿ ಜೀವನ ಅಸ್ಥವ್ಯಸ್ತವಾಗಿದೆ. ವಿದ್ಯಾರ್ಥಿಗಳು ಸಹ ಮೈ ಒದ್ದೆ ಮಾಡಿಕೊಂಡು ಶಾಲಾ ಕಾಲೇಜುಗಳಿಗೆ ಹೋಗುತ್ತಿರುವ ದೃಶ್ಯ ಕಂಡುಬಂದಿತು. ಜೊತೆಗೆ ರಸ್ತೆಗಳಲ್ಲಿ ನೀರು ತುಂಬಿಕೊಂಡು ವಾಹನ ಸವಾರರು ಪರದಾಡುವಂತಾಯಿತು. ಮಳೆ ಹಿನ್ನೆಲೆ ಮರದ ಟೊಂಗೆಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಕಿಡಿ ಕಾಣಿಸಿಕೊಂಡಿರುವ ಘಟನೆ ನಗರದ ವೀರೇಂದ್ರ ಪಾಟೀಲ್ ಬಡಾವಣೆಯಲ್ಲಿ ನಡೆಯಿತು. ಇದರಿಂದ ಕೆಲ ಕಾಲ ಸಾರ್ವಜನಿಕರಲ್ಲಿ ಆತಂಕ ಮಾನೆಮಾಡಿತು. ಇನ್ನು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಮತ್ತಷ್ಟು ಮಳೆಯಾಗುವ ಸಾಧ್ಯತೆ ಕೂಡ ಇದೆ.