ಮಲೆನಾಡಿನಲ್ಲಿ ಭಾರಿ ಮಳೆ ಗಾಳಿಗೆ ಹಾರಿಹೋದ 50 ಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿ - ಗಾಳಿಗೆ ಹಾರಿಹೋದ 50 ಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿ
🎬 Watch Now: Feature Video
ಶಿವಮೊಗ್ಗ: ಭಾರಿ ಪ್ರಮಾಣದ ಗಾಳಿ ಮಳೆಗೆ ಜಿಲ್ಲೆಯ ಉಡುಗಣಿ ಗ್ರಾಮದ 50 ಕ್ಕೂ ಹೆಚ್ಚು ಮನೆಯ ಮೇಲ್ಛಾವಣಿಗಳು ಹಾರಿ ಹೋಗಿವೆ. ಗ್ರಾಮದಲ್ಲಿ ಸಂಜೆ ಇದ್ದಕ್ಕಿದ್ದಂತೆಯೇ ಬಂದ ಗಾಳಿ ಹಾಗೂ ಮಳೆಗೆ ಮನೆ ಮೇಲ್ಛಾವಣಿಗಳು ಹಾರಿ ಹೋಗಿವೆ. ಅದೇ ರೀತಿ ವಿದ್ಯುತ್ ಕಂಬ ಹಾಗೂ ತೆಂಗಿನ ಮರ ಬಿದ್ದು ಮನೆಗಳಿಗೆ ಹಾನಿಯಾಗಿದೆ. ಆದ್ರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.