ತಣ್ಣೀರುಬಾವಿ ಕಡಲ ಕಿನಾರೆಯಲ್ಲಿ ಮೊಳಗಿತು ಲಕ್ಷ ಕಂಠಗಳ 'ಗೀತಗಾಯನ' - ತಣ್ಣೀರುಬಾವಿ ಕಡಲ ಕಿನಾರೆಯಲ್ಲಿ ಮೊಳಗಿತು ಲಕ್ಷ ಕಂಠಗಳ 'ಗೀತಗಾಯನ'
🎬 Watch Now: Feature Video
ಮಂಗಳೂರಿನ ತಣ್ಣೀರುಬಾವಿಯ ಕಡಲ ಕಿನಾರೆಯಲ್ಲಿ ಲಕ್ಷ ಕಂಠಗಳ 'ಗೀತಗಾಯನ' ಕಾರ್ಯಕ್ರಮದಲ್ಲಿ ನಗರದ ಶಾಲೆಯ ಸಾವಿರಾರು ಮಕ್ಕಳು ಕನ್ನಡ ಗೀತೆಗಳನ್ನು ಪ್ರಸ್ತುತ ಪಡಿಸಿದರು. ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಹಮ್ಮಿಕೊಳ್ಳಲಾಗಿರುವ 'ಕನ್ನಡಕ್ಕಾಗಿ ನಾವು' ಅಭಿಯಾನದ ಅಡಿ ಕನ್ನಡ ಭಾಷೆಯ ಮಹತ್ವ ಸಾರುವ ಲಕ್ಷ ಕಂಠಗಳ ಸಮೂಹ ಗೀತ ಗಾಯನ ಹಮ್ಮಿಕೊಳ್ಳಲಾಗಿತ್ತು. ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ದೈನಂದಿನ ವ್ಯವಹಾರಗಳಲ್ಲಿ ಕನ್ನಡ ಭಾಷೆಯನ್ನೇ ಬಳಸುವ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು. ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಕನ್ನಡದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಸರ್ಕಾರದಿಂದ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಉದ್ದಗಲಕ್ಕೂ ಲಕ್ಷಾಂತರ ಜನರು ಕನ್ನಡ ಭಾಷೆಯ ಮಹತ್ವ ಸಾರುವ ಗೀತೆಗಳನ್ನು ಹಾಡುವ ನೂತನ ಕಾರ್ಯಕ್ರಮವನ್ನು ಸಿಎಂ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಅವರ ಪರಿಕಲ್ಪನೆಯಲ್ಲಿ ಹಾಡಿಸಲಾಗುತ್ತಿದೆ ಎಂದರು.