ಕೊರೊನಾ ತಡೆ ಕ್ರಮಗಳ ಬಗ್ಗೆ ಚಿತ್ರದುರ್ಗದಲ್ಲಿ ಸಭೆ ನಡೆಸಿದ ಸಚಿವ ಶ್ರೀರಾಮುಲು - Minister Shri Ramulu latest news
🎬 Watch Now: Feature Video
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಆರೋಗ್ಯ ಸಚಿವ ಶ್ರೀರಾಮುಲು ರಾಜ್ಯ ಪ್ರವಾಸದಲ್ಲಿದ್ದಾರೆ. ಇಂದು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದ ಅವರು, ಕೊರೊನಾ ವೈರಸ್ ವಿಚಾರವಾಗಿ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಹೋಂ ಕ್ವಾರಂಟೈನ್ನಲ್ಲಿರುವವರು ಹೊರ ಬಾರದಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಹಾಗೂ ಡಿಹೆಚ್ಒ ಪಾಲಾಕ್ಷ ಅವರಿಗೆ ಸೂಚಿಸಿದರು. ಅಲ್ಲದೇ ಕೋವಿಡ್-19 ಸೋಂಕಿತರಿಗಾಗಿ ಪ್ರತ್ಯೇಕ ಕಟ್ಟಡ ಬಳಕೆಗೆ ತಾಕೀತು ಮಾಡಿದರು.