ಮೈಸೂರು ವಿವಿಯಲ್ಲಿ ನಡೆದ ಪ್ರತಿಭಟನೆಗೆ ಅನುಮತಿ ಪಡೆದಿರಲಿಲ್ಲ: ಕುಲಸಚಿವ ಶಿವಪ್ಪ ಸ್ಪಷ್ಟನೆ
🎬 Watch Now: Feature Video
ಮೈಸೂರು: ಜೆ.ಎನ್.ಯು ವಿವಿ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಬುಧವಾರ ಮೈಸೂರು ವಿವಿಯ ಕ್ಲಾಕ್ ಟವರ್ ಬಳಿ ವಿವಿಧ ಸಂಘಟನೆಯವರು ಪಂಜಿನ ಮೆರವಣಿಗೆ ನಡೆಸಿದ್ದರು. ಇದರಲ್ಲಿ ಫ್ರೀ ಕಾಶ್ಮೀರ ಎಂಬ ಪೋಸ್ಟರ್ ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ಮೈಸೂರು ವಿವಿ ಕುಲಸಚಿವ ಶಿವಪ್ಪ ಸ್ಪಷ್ಟನೆ ನೀಡಿದ್ದಾರೆ. ಪೂರ್ವಾನುಮತಿ ಪಡೆಯದೇ ಸಂಘಟನೆಯವರು ಪ್ರತಿಭಟನೆ ನಡೆಸಿದ್ದಾರೆ. ನಾವು ಈ ಘಟನೆ ಬಗ್ಗೆ ತಕ್ಷಣ ತನಿಖೆ ನಡೆಸಿ, ಮಾಹಿತಿ ಕೊಡಿ ಎಂದು ಪೊಲೀಸರಿಗೆ ಮನವಿ ಮಾಡಿದ್ದೇವೆ. ಈ ಕುರಿತು ರಾಜಭವನ ಹಾಗೂ ಸರ್ಕಾರದಿಂದಲೂ ವಿವರಣೆ ಕೇಳಿದ್ದಾರೆ ಎಂದು ಈಟಿವಿ ಭಾರತಕ್ಕೆ ಶಿವಪ್ಪ ಮಾಹಿತಿ ನೀಡಿದ್ದಾರೆ.