ಕುಂದಗೋಳ ಬಸ್ ನಿಲ್ದಾಣದಲ್ಲಿ ಗಮನ ಸೆಳೆದ ಛಾಯಾಚಿತ್ರ ಪ್ರದರ್ಶನ - ಹುಬ್ಬಳ್ಳಿ ಬಸ್ ನಿಲ್ದಾಣದಲ್ಲಿ ಛಾಯಾಚಿತ್ರ ಪ್ರದರ್ಶನ
🎬 Watch Now: Feature Video
ಹುಬ್ಬಳ್ಳಿಯ ಕುಂದಗೋಳ ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಮೂರು ದಿನಗಳ ಕಾಲ ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ. ಸರ್ಕಾರದ ನೂರು ದಿನಗಳ ಆಡಳಿತ ಹಾಗೂ ಸಾಧನೆಯ ಛಾಯಾಚಿತ್ರ ಪ್ರದರ್ಶನವನ್ನು ಕುಂದಗೋಳ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಯ ಗ್ರಾಮಸ್ಥರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಸರ್ಕಾರದ ಸಾಧನೆ ಹಾಗೂ ಪ್ರವಾಹ ಸಂತ್ರಸ್ತರಿಗೆ ಕೈಗೊಂಡ ಪರಿಹಾರ, ಸಾಲ ಮನ್ನಾ ಸೇರಿದಂತೆ ಪ್ರತಿಯೊಂದು ವಿಷಯಗಳ ಛಾಯಾಚಿತ್ರಗಳು ನೋಡುಗರ ಗಮನ ಸೆಳೆದವು.