ಪೌರತ್ವ ಕಾಯ್ದೆ ವಿರೋಧಿಸಿ ಗುಡಿಬಂಡೆಯಲ್ಲಿ ಪ್ರತಿಭಟನೆ
🎬 Watch Now: Feature Video
ಚಿಕ್ಕಬಳ್ಳಾಪುರ/ಗುಡಿಬಂಡೆ: ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿ ತಾಲೂಕು ಕಚೇರಿ ಆವರಣದಲ್ಲಿ ಜಾಮಿಯಾ ಉಲ್ ಮಾಯಿ ಹಿಂದ್ ಸಂಘಟನೆ ಸದಸ್ಯರು, ಸಮುದಾಯದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಾಜಿ ಶಾಸಕ ಜಿ.ವಿ. ಶ್ರೀರಾಮರೆಡ್ಡಿ ಮಾತನಾಡಿ ಧರ್ಮದ ಆಧಾರದಲ್ಲಿ ಅಕ್ರಮ ವಲಸಿಗರಿಗೆ ಪೌರತ್ವ ನೀಡುವ ವಿಚಾರ, ಸಂವಿಧಾನದತ್ತ ಸಮಾನತೆ ಹಕ್ಕುಗಳನ್ನು ಉಲ್ಲಂಘಿಸಿದಂತೆ ಆಗಿದೆ. ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಕಾಯ್ದೆಯನ್ನು ತಿದ್ದುಪಡಿ ಮಾಡಲಾಗಿದೆ. ಸರ್ಕಾರ ಧರ್ಮಧರ್ಮಗಳ ಮಧ್ಯೆ ವೈರತ್ವದ ಬೀಜ ಬಿತ್ತುವಂತಹ ಕೆಲಸಕ್ಕೆ ಕೈ ಹಾಕಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.