ಸಿಎಎ ಹಿಂಪಡೆಯಲು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ..

By

Published : Jan 6, 2020, 7:10 PM IST

thumbnail

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ಖಂಡಿಸಿ ಎನ್ಎಸ್​ಯುಐ ಸಂಘಟನೆ ಹಾಗೂ ನೆಹರು ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟಿಸಿದರು. ಸರ್ಕಾರ ಕೂಡಲೇ ಕಾಯ್ದೆಯನ್ನು ಹಿಂಪಡೆಯಬೇಕು. ಇಲ್ಲದಿದ್ರೆ ಮುಂದಿನ ದಿನಗಳಲ್ಲಿ ದೇಶದಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ಜೆಎನ್​ಯು ವಿವಿ ವಿದ್ಯಾರ್ಥಿಗಳ ಮೇಲೆ ನಡೆದಿರುವ ಹಲ್ಲೆ ಖಂಡನೀಯ. ಕೂಡಲೇ ಹಲ್ಲೆ ಮಾಡಿದವರನ್ನು ಬಂಧಿಸಬೇಕು. ಅಲ್ಲದೇ ಉನ್ನತ ಮಟ್ಟದ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಗೆ ಕಾಂಗ್ರೆಸ್ ಮುಖಂಡರು ಕೂಡ ಸಾಥ್ ನೀಡಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.