ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿ ಖಂಡಿಸಿ ಶಿವಮೊಗ್ಗ ಕೈ ಕಾರ್ಯಕರ್ತರ ಪ್ರತಿಭಟನೆ - ಶಿವಮೊಗ್ಗ ಕಾಂಗ್ರೆಸ್​ ಪ್ರತಿಭಟನೆ

🎬 Watch Now: Feature Video

thumbnail

By

Published : Feb 2, 2021, 3:58 PM IST

ಶಿವಮೊಗ್ಗ ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್. ಎಸ್. ಸುಂದರೇಶ್ ನೇತೃತ್ವದಲ್ಲಿ ಕೈ ಕಾರ್ಯಕರ್ತರು ಲಕ್ಷ್ಮಿ ಟಾಕೀಸ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಸ್ಮಾರ್ಟ್ ಸಿಟಿ‌ ಯೋಜನೆ ಕಾಮಗಾರಿಗಳು ಕಳಪೆ ಮಟ್ಟದ್ದಾಗಿವೆ. ಈ ಅವ್ಯವಹಾರದಲ್ಲಿ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರು ಭಾಗಿಯಾಗಿದ್ದಾರೆ. ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ಅಪರಾಧಿಗಳಿಗೆ ತಕ್ಕ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಅಲ್ಲದೇ, ಕಳಪೆ ಗುಣಮಟ್ಟದ ಕಾಮಗಾರಿ ಮಾಡಿರುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಗುಣ ಮಟ್ಟದ ಕಾಮಗಾರಿ ನಡೆಸುವಂತೆ ಒತ್ತಾಯಿಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.