ಶ್ರೀಮಂತ್ ಪಾಟೀಲ್, ಮಹೇಶ್ ಕುಮಟಳ್ಳಿಗೆ ಅರ್ಹತೆ ನೀಡಿದ ಮತದಾರ: ಅದ್ಧೂರಿ ಸಂಭ್ರಮಾಚರಣೆ - ಉಪಚುನಾವಣೆ ಫಲಿತಾಂಶ ನ್ಯೂಸ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5314611-thumbnail-3x2-lek.jpg)
ಚಿಕ್ಕೋಡಿ, ಅಥಣಿ: ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಗೆಲುವು ಸಾಧಿಸಿದ ಹಿನ್ನೆಲೆ ಅಥಣಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಬಿಜೆಪಿ ಪರ ಜಯಕಾರ ಕೂಗಿ, ಪಟಾಕಿ ಸಿಡಿಸಿ, ಕೇಸರಿ ಬಣ್ಣ ಎರಚಿ ಸಂತಸ ವ್ಯಕ್ತಪಡಿಸಿದರು. ಅಥಣಿ ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಸಿಬ್ಬಂದಿ ನೇಮಕ ಮಾಡಲಾಗಿದೆ. ಇನ್ನು ಕಾಗವಾಡ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ್ ಪಾಟೀಲ್ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಪರಸ್ಪರ ಗುಲಾಲ್ ಹಚ್ಚುವುದರ ಮೂಲಕ ಸಂಭ್ರಮಾಚರಣೆ ಮಾಡುತ್ತಿದ್ದಾರೆ.