ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಎಸ್ಡಿಟಿಯು ಪ್ರತಿಭಟನೆ - STDU protests against oil price hike
🎬 Watch Now: Feature Video
ಮಂಗಳೂರು: ತೈಲ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಎಸ್ಡಿಟಿಯು( ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್) ನಗರದ ಮಿನಿ ವಿಧಾನ ಸೌಧದ ಮುಂಭಾಗ ಪ್ರತಿಭಟನೆ ನಡೆಸಿತು. ಈ ಸಂದರ್ಭದಲ್ಲಿ ಸಿಲಿಂಡರ್ ಹಾಗೂ ಕಟ್ಟಿಗೆಯನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯಿತು. ಯುಪಿಎ ಸರ್ಕಾರ ಇದ್ದಾಗ ತೈಲ ಬೆಲೆ, ಅಡುಗೆ ಅನಿಲ ಬೆಲೆ ಏರಿಕೆಯಾದಾಗ ಕೋಲಾಹಲ ಎಬ್ಬಿಸಿದ ಬಿಜೆಪಿಗರು, ಇದೀಗ ಇಷ್ಟೊಂದು ಬೆಲೆ ಏರಿಕೆಯಾದಾಗ ಕೋಮಾಕ್ಕೆ ಜಾರಿದ್ದಾರೆ. ಕೇಂದ್ರ ಸರ್ಕಾರ ಜನರ ದಾರಿ ತಪ್ಪಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.