ಅನಿಲ ದರ ಏರಿಕೆಗೆ ವಿರೋಧ ವ್ಯಕ್ತಪಡಿಸಿ ಎಸ್ಯುಸಿಐ ಸಂಘಟನೆ ಪ್ರತಿಭಟನೆ - ಅನಿಲ ದರ ಏರಿಕೆಗೆ ವಿರೋಧ ವ್ಯಕ್ತಪಡಿಸಿ ಎಸ್ಯುಸಿಐ ಸಂಘಟನೆ ಪ್ರತಿಭಟನೆ
🎬 Watch Now: Feature Video
ಕಲಬುರಗಿ: ಬಿಜೆಪಿ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡವರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಆರೋಪಿಸಿ ಅಡುಗೆ ಅನಿಲ ದರ ಏರಿಕೆಗೆ ವಿರೋಧ ವ್ಯಕ್ತಪಡಿಸಿ ಎಸ್.ಯು.ಸಿ.ಐ. ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಏಕಾಏಕಿ ಸಿಲಿಂಡರ್ ಬೆಲೆಯನ್ನು 145 ರೂಪಾಯಿ ಏರಿಸಿರುವ ಮೂಲಕ ಕೇಂದ್ರ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ. ನಿತ್ಯೋಪಯೋಗಿ ವಸ್ತುಗಳು ಗಗನಕ್ಕೇರಿರುವಾಗಲೇ ಸಿಲಿಂಡರ್ ದರ ಏರಿಸಿ ಗಾಯದ ಮೇಲೆ ಬರೆ ಎಳೆಯಲಾಗಿದೆ ಎಂದು ಆರೋಪಿಸಿದರು. ಜೊತೆಗೆ ಕೂಡಲೇ ಸಿಲಿಂಡರ್ ದರ ಏರಿಕೆ ವಾಪಸ್ ಪಡೆಯುವಂತೆ ಆಗ್ರಹಿಸಿದರು.