ಸಚಿವ ಸಂಪುಟ ವಿಸ್ತರಣೆ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದೇನು?
🎬 Watch Now: Feature Video
ಸಚಿವ ಮಾಧುಸ್ವಾಮಿ ಇನ್ನೊಬ್ಬರಿಗೆ ಸಚಿವ ಸ್ಥಾನ ಸಿಗಲು ತಾವು ಶಾಸಕ ತ್ಯಾಗಕ್ಕೆ ಸಿದ್ಧ ಅಂತಾ ಹೇಳಿರುವುದು ಅವರ ವೈಯಕ್ತಿಕ ವಿಚಾರ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ಈ ಕುರಿತಂತೆ ಅಂತಿಮ ನಿರ್ಣಯ ಕೈಗೊಳ್ಳುವುದು ರಾಜ್ಯದ ಮುಖ್ಯಮಂತ್ರಿ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಅವರಿಗೆ ಪರಮಾಧಿಕಾರವಿದೆ. ಸಿಎಂ ಮತ್ತು ಹೈಕಮಾಂಡ್ ಯಾವುದೇ ತೀರ್ಮಾನ ಕೈಗೊಂಡರು ನಾವು ಸಂತೋಷದಿಂದ ಒಪ್ಪಿಕೊಳ್ಳುತ್ತೇವೆ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದರು.