ಮತಗಟ್ಟೆ ಪರಿಶೀಲನೆಗೆ ತೆರಳಿದ ಅಧಿಕಾರಿಗಳಿಗೆ ಎದುರಾದ ಒಂಟಿ ಸಲಗ - The lone elephant encountered the officers at banjarumale
🎬 Watch Now: Feature Video

ಬೆಳ್ತಂಗಡಿ : ಚುನಾವಣೆ ಮತಗಟ್ಟೆ ಪರಿಶೀಲನೆಗೆ ತೆರಳಿದ ಅಧಿಕಾರಿಗಳಿಗೆ ಒಂಟಿ ಸಲಗ ಎದುರಾದ ಘಟನೆ ಬಾಂಜಾರುಮಲೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ಕೇಂದ್ರದಿಂದ 35 ಕಿ.ಮೀ ದೂರದಲ್ಲಿರುವ ಬಾಂಜಾರುಮಲೆ ಪ್ರದೇಶ ನೆರಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಗಳೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟಿಯ 9ನೇ ತಿರುವಿನಿಂದ ಸುಮಾರು 10 ಕಿ.ಮೀ ಒಳ ಭಾಗದಲ್ಲಿದೆ. ಕಾಡಿನಿಂದ ಆವೃತವಾಗಿರುವ ಈ ಪ್ರದೇಶದಲ್ಲಿ ಸುಮಾರು 45 ಮನೆಗಳಿವೆ. ಇಲ್ಲಿಗೆ ಚುನಾವಣಾಧಿಕಾರಿ ರಘು, ಸಹಾಯಕ ಚುನಾವಣಾಧಿಕಾರಿ ಅಜಿತ್, ನೆರಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಹಾಗೂ ಸಿಬ್ಬಂದಿ ಮತಗಟ್ಟೆ ಪರಿಶೀಲನೆಗೆ ತೆರಳಿದ ಸಂದರ್ಭದಲ್ಲಿ ಒಂಟಿ ಸಲಗ ಎದುರಾಗಿದೆ. ವಾಹನದ ಮೂಲಕ ಹೋಗುತ್ತಿದ್ದಾಗ ರಸ್ತೆಯಲ್ಲಿ ಒಂಟಿ ಸಲಗ ಕಂಡು ಬಂದಿದ್ದು, ಸಮೀಪವಿದ್ದ ಇನ್ನೊಂದು ಕವಲು ರಸ್ತೆಯಲ್ಲಿ ವಾಹನವನ್ನು ಕೊಂಡೊಯ್ದು ಗ್ರಾಮಕ್ಕೆ ತೆರಳಿದ್ದಾರೆ.