ಕೋವಿಡ್-19: ಕಲ್ಪತರು ನಾಡಲ್ಲಿ 1,920 ಮಂದಿಗೆ ಕ್ವಾರಂಟೈನ್ - ಕಲ್ಪತರು ನಾಡಲ್ಲಿ 1,920 ಮಂದಿಗೆ ಕ್ವಾರಂಟೈನ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7230981-thumbnail-3x2-lek.jpg)
ತುಮಕೂರು: ಕೋವಿಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ 1,920 ಮಂದಿಯನ್ನು ಕ್ವಾರಂಟೈನ್ನಲ್ಲಿ ಇಡಲಾಗಿದೆ. 791 ಮಂದಿಯನ್ನು ಶಂಕಿತರೆಂದು ಗುರುತಿಸಿ ಜಿಲ್ಲಾ ಆಸ್ಪತ್ರೆಯ ಐಸೋಲೇಷನ್ ವಾರ್ಡ್ನಲ್ಲಿ ಇರಿಸಲಾಗಿದೆ. ಇದುವರೆಗೂ ಜಿಲ್ಲೆಯಾದ್ಯಂತ 6,878 ಜನರ ಸ್ಯಾಂಪಲ್ಗಳನ್ನು ಪಡೆಯಲಾಗಿದೆ. ಅದರಲ್ಲಿ 6,392 ಮಂದಿಗೆ ನೆಗೆಟಿವ್ ಬಂದಿದೆ. 437 ಮಂದಿಯ ಸ್ಯಾಂಪಲ್ ಗಳ ವರದಿ ಬರಬೇಕಿದೆ. 38 ಜನರ ಸ್ಯಾಂಪಲ್ ವರದಿಯನ್ನು ತಿರಸ್ಕರಿಸಿ, ಪುನಃ ಪರೀಕ್ಷೆಗೆ ಕಳುಹಿಸಲಾಗಿದೆ. ಇದುವರೆಗೂ ಜಿಲ್ಲೆಯಲ್ಲಿ 11 ಮಂದಿಯಲ್ಲಿ ಕೋವಿಡ್-19 ಸೋಂಕು ಕಂಡುಬಂದಿದೆ. ಇಬ್ಬರು ಮೃತಪಟ್ಟಿದ್ದಾರೆ. 13 ವರ್ಷದ ಬಾಲಕ ಸೇರಿ ಇಬ್ಬರು ಗುಣಮುಖರಾಗಿದ್ದಾರೆ. ಏಳು ಮಂದಿಗೆ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.