ರಾತ್ರಿ 8 ಗಂಟೆ ನಂತರ ಮನೆಯಿಂದ ಹೊರ ಬರದಂತೆ ಪೊಲೀಸರ ವಾರ್ನಿಂಗ್ - Police alert not to leave home after 8 pm
🎬 Watch Now: Feature Video
ಕೊರೊನಾ ಭೀತಿ ಹಿನ್ನೆಲೆಯಲ್ಲಿ ಈಗಾಗಲೇ ತುಮಕೂರು ಜಿಲ್ಲಾದ್ಯಂತ ರಾತ್ರಿ 8 ಗಂಟೆಯಿಂದ ಎಲ್ಲ ರೀತಿಯ ವ್ಯಾಪಾರ ವಹಿವಾಟು ಸ್ಥಗಿತಗೊಳಿಸುವಂತೆ ಸೂಚನೆ ನೀಡಲಾಗಿದೆ. ಇದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಇನ್ನೊಂದೆಡೆ ಪೊಲೀಸರು ಕೂಡ ನಗರದಾದ್ಯಂತ ಗಸ್ತು ತಿರುಗುತ್ತಿದ್ದು, ಸಾರ್ವಜನಿಕರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ನಿರಂತರವಾಗಿ ನಗರದ ವಿವಿಧೆಡೆ ಸಂಚರಿಸುತ್ತಿರುವ ಪೊಲೀಸರು ಧ್ವನಿವರ್ಧಕದ ಮೂಲಕ ಯಾರೂ ಕೂಡ ಮನೆಯಿಂದ ಹೊರಬರದಂತೆ ಸೂಚನೆ ನೀಡುತ್ತಿದ್ದಾರೆ. ಇಲ್ಲದಿದ್ದರೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡುತ್ತಿದ್ದಾರೆ.