ವಾಣಿಜ್ಯ ನಗರಿಯಲ್ಲಿ ವೈಕುಂಠ ಏಕಾದಶಿ ಸಂಭ್ರಮ - ಹುಬ್ಬಳ್ಳಿ ಇಸ್ಕಾನ್ ದೇವಸ್ಥಾನ ವಿಶೇಷ ಪೂಜೆ
🎬 Watch Now: Feature Video

ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದೆ. ಹುಬ್ಬಳ್ಳಿಯ ಇಸ್ಕಾನ್ ದೇವಸ್ಥಾನದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆಯುತ್ತಿದ್ದು, ಸಾವಿರಾರು ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ. ಇಂದು ನಡೆಯುತ್ತಿರುವ ವಿಶೇಷ ಪೂಜೆ ಅಂಗವಾಗಿ 15 ಅಡಿ ಎತ್ತರ ಹಾಗೂ 11 ಅಡಿ ಅಗಲದ ವೈಕುಂಠ ದ್ವಾರ ನಿರ್ಮಾಣ ಮಾಡಲಾಗಿದೆ. ಬಣ್ಣ ಬಣ್ಣದ ಪುಷ್ಪಗಳಿಂದ ಇಸ್ಕಾನ್ ದೇವಸ್ಥಾನ ಕಂಗೊಳಿಸುತ್ತಿದೆ. ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಬೆಳಿಗ್ಗೆ 10ರಿಂದ ರಾತ್ರಿ 9ರವರೆಗೆ ದೇವಸ್ಥಾನದಲ್ಲಿ ಲಕ್ಷಾರ್ಚನೆ ನಡೆಯುತ್ತಿದ್ದು, ಸಾವಿರಾರು ಭಕ್ತರು ವಿಶೇಷ ಪೂಜೆ ಮಾಡಿಸುತ್ತಿದ್ದಾರೆ.