ಎನ್ಸಿಸಿ ಕೆಡೆಟ್ಗಳನ್ನು ಅಭಿನಂದಿಸಿದ ಸಿಎಂ ಬಸವರಾಜ ಬೊಮ್ಮಾಯಿ - ಎನ್ಸಿಸಿ ಕೆಡೆಟ್ಗಳನ್ನು ಅಭಿನಂದಿಸಿದ ಸಿಎಂ ಬಸವರಾಜ ಬೊಮ್ಮಾಯಿ
🎬 Watch Now: Feature Video
ಬೆಂಗಳೂರು: ಈ ಬಾರಿ ನವದೆಹಲಿಯಲ್ಲಿ ನಡೆದಿದ್ದ ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾಗವಹಿಸಿದ್ದ ಎನ್ಸಿಸಿ ಕೆಡೆಟ್ಗಳೊಂದಿಗೆ ಭಾವಚಿತ್ರ ತೆಗೆಸಿಕೊಳ್ಳುವ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಭಾಗವಹಿಸಿದ್ದರು. ಶನಿವಾರ ಸಂಜೆ ವಿಧಾನಸೌಧ ಮುಂಭಾಗ ಎನ್ಸಿಸಿ ಕೆಡೆಟ್ಗಳೊಂದಿಗೆ ಭಾವಚಿತ್ರ ತೆಗೆಸಿಕೊಂಡು ಕೆಡೆಟ್ಗಳನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಶಾಸಕ ನಾರಾಯಣಸ್ವಾಮಿ ಹಾಗೂ ಎನ್ಸಿಸಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ವೇಳೆ ಎನ್ಸಿಸಿ ಕೆಡೆಟ್ಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ನೆರೆದಿದ್ದವರನ್ನು ರಂಜಿಸಿತು.
Last Updated : Feb 3, 2023, 8:19 PM IST