ಬಜೆಟ್ ಮೇಲಿನ ಚರ್ಚೆ.. ಸಿದ್ದರಾಮಯ್ಯ ಹೇಳಿಕೆ ಪ್ರಸ್ತಾಪಿಸಿದ ಹೆಚ್‌ಡಿಕೆ ವಿರುದ್ಧ ಕಾಂಗ್ರೆಸ್ ಶಾಸಕರು ಗರಂ - ವಿಧಾನಸಭೆ ಅಧಿವೇಶನದಲ್ಲಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಭಾಗಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-14680641-thumbnail-3x2-hdk.jpg)
ವಿಧಾನಸಭೆ ಕಲಾಪದಲ್ಲಿ ಬಜೆಟ್ ಮೇಲಿನ ಚರ್ಚೆ ವೇಳೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿದ್ದನ್ನೇ ಪ್ರಸ್ತಾಪ ಮಾಡುತ್ತಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಶಾಸಕರು ಆಕ್ರೋಶ ವ್ಯಕ್ತಪಡಿಸಿದರು. ಹೆಚ್‌ಡಿಕೆ ಮಾತನಾಡುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್ ನಾಯಕ ಯು ಟಿ ಖಾದರ್ ಅವರು ನೀವು ಸಿಎಂ ಮಂಡಿಸಿದ ಬಜೆಟ್ ಮೇಲೆ ಮಾತನಾಡುತ್ತಿದ್ದೀರಾ? ಇಲ್ಲ, ನಿನ್ನೆ ಸಿದ್ದರಾಮಯ್ಯ ಮಾತನಾಡಿದ್ದರ ಮೇಲೆನಾ ಎಂದು ಪ್ರಶ್ನಿಸಿದರು. ಈ ವೇಳೆ ಸದನದಲ್ಲಿ ಭಾರಿ ಗದ್ದಲ ಉಂಟಾಯಿತು. ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಕೂಗಿ ಕಾಂಗ್ರೆಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
Last Updated : Feb 3, 2023, 8:19 PM IST
TAGGED:
Karnataka Assembly session