ಎರಡು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟ ಬಿಗ್ ಬಿ - ಅಭಿಮಾನಿಗಳನ್ನು ಭೇಟಿಯಾಗಿ ಬಿಗ್ ಬಿ ಸರ್ಪ್ರೈಸ್
🎬 Watch Now: Feature Video
ಇಂದು ಬಾಲಿವುಡ್ ಚಿತ್ರರಂಗದ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಜಲ್ಸಾದ ನಿವಾಸದೆದುರು ಮೆಚ್ಚಿನ ನಟನಿಗೆ ಶುಭಾಶಯ ಕೋರಲು ನಿನ್ನೆ ಮಧ್ಯರಾತ್ರಿ ಜಮಾಯಿಸಿದ್ದ ಅಭಿಮಾನಿಗಳನ್ನು ಭೇಟಿಯಾಗಿ ಬಿಗ್ ಬಿ ಸರ್ಪ್ರೈಸ್ ಕೊಟ್ಟಿದ್ದಾರೆ. ಈ ಮೊದಲು ನಟ ಅಮಿತಾಭ್ ಬಚ್ಚನ್ ಪ್ರತಿ ಭಾನುವಾರ ತಮ್ಮ ನಿವಾಸದ ಹೊರಗೆ ಅಭಿಮಾನಿಗಳನ್ನು ಭೇಟಿಯಾಗುತ್ತಿದ್ದರು. ಆದರೆ ಕೋವಿಡ್ ಸಮಯದಲ್ಲಿ ಈ ದಿನಚರಿಯನ್ನು ನಿಲ್ಲಿಸಿದ್ದರು. ಎರಡು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಬಿಗ್ ಬಿ ತಮ್ಮ ನಿವಾಸದ ಹೊರಗೆ ಜಮಾಯಿಸಿದ್ದ ಅಭಿಮಾನಿಗಳನ್ನು ಮಾತನಾಡಿಸಿ ಸರ್ಪ್ರೈಸ್ ಕೊಟ್ಟಿದ್ದಾರೆ.
Last Updated : Feb 3, 2023, 8:29 PM IST