ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಬಾಲಿವುಡ್ ನಟ ಸಂಜಯ್ ದತ್- ವಿಡಿಯೋ - Sanjay Dutt visits Chamundeshwari temple
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/18-07-2023/640-480-19028228-thumbnail-16x9-news.jpg)
ಮೈಸೂರು: ಬಾಲಿವುಡ್ ನಟ ಸಂಜಯ್ ದತ್ ಸದ್ಯ ಮೈಸೂರಿನಲ್ಲಿದ್ದಾರೆ. ಕಳೆದ ಕೆಲವು ದಿನಗಳಿಂದ ಪಾರಂಪರಿಕ ನಗರಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆ.ಡಿ ಚಿತ್ರದ ಶೂಟಿಂಗ್ ಭರ್ಜರಿಯಾಗಿ ನಡೆಯುತ್ತಿದೆ. ಸೋಮವಾರ ಸಂಜೆ ನಿರ್ದೇಶಕ ಜೋಗಿ ಪ್ರೇಮ್ ಅವರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ದತ್, ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ದರ್ಶನ ಪಡೆದರು. ಕೆಡಿ ಚಿತ್ರತಂಡದವರು ಜೊತೆಗಿದ್ದರು.
ಕಳೆದ 20 ದಿನಗಳಿಂದ ಜೋಗಿ ನಿರ್ದೇಶನ, ಧ್ರುವಸರ್ಜಾ ಅಭಿನಯದ ಕೆಡಿ ಸಿನಿಮಾದ ಶೂಟಿಂಗ್ ಮೈಸೂರಿನ ವಿವಿಧ ಭಾಗಗಳಲ್ಲಿ ಸಾಗುತ್ತಿದೆ. ಈ ಚಿತ್ರದಲ್ಲಿ ಸಂಜಯ್ ದತ್ ಸಹ ಅಭಿನಯಿಸುತ್ತಿದ್ದಾರೆ. ಕಳೆದ ಒಂದು ವಾರದಿಂದ ಅವರು ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದು, ಸೋಮವಾರ ಅಮಾವಾಸ್ಯೆ ಹಿನ್ನೆಲೆಯಲ್ಲಿ ಚಿತ್ರತಂಡ ಹಾಗೂ ನಿರ್ದೇಶಕ ಪ್ರೇಮ್ ಜೊತೆ ಸೇರಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಂಜಯ್ ದತ್, ''ನಮ್ಮ ಈ ಚಿತ್ರ ಚೆನ್ನಾಗಿದೆ, ನೋಡಿ'' ಎಂದಷ್ಟೇ ತಿಳಿಸಿ ಹೊರಟು ಹೋದರು.
ಇದನ್ನೂ ಓದಿ: ಪ್ರಾಜೆಕ್ಟ್ ಕೆ - ಬಹುಬೇಡಿಕೆ ನಟಿ ದೀಪಿಕಾ ಪಡುಕೋಣೆ ಫಸ್ಟ್ ಲುಕ್ ಅನಾವರಣ