ನಾಳೆ ಆಚಾರ್ & ಕೋ ಬಿಡುಗಡೆ: ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್ - ಈಟಿವಿ ಭಾರತ ಕನ್ನಡ

🎬 Watch Now: Feature Video

thumbnail

By

Published : Jul 27, 2023, 7:43 PM IST

ಮೈಸೂರು: ಪಿ.ಆರ್.ಕೆ ಪ್ರೊಡಕ್ಷನ್ಸ್ ನಿರ್ಮಾಣದ ಆಚಾರ್​ & ಕೋ ಸಿನಿಮಾ ನಾಳೆ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಇಂದು ನಿರ್ಮಾಪಕಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಚಿತ್ರತಂಡದೊಂದಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಾಳೆ ಬಿಡುಗಡೆಯಾಗುತ್ತಿರುವ ಸಿನಿಮಾದ ಯಶಸ್ಸಿಗಾಗಿ ಪ್ರಾರ್ಥಿಸಿದ್ದಾರೆ.

ಬಳಿಕ ಸಂಜೆ 7 ಗಂಟೆಗೆ ಮೈಸೂರಿನ ಡಿ.ಆರ್​.ಸಿ ಚಿತ್ರಮಂದಿರದಲ್ಲಿ ಆಚಾರ್​ & ಕೋ ಚಿತ್ರವನ್ನು ಚಿತ್ರತಂಡದೊಂದಿಗೆ ಅಶ್ವಿನಿ ಪುನೀತ್​ ರಾಜ್​ಕುಮಾರ್​ ವೀಕ್ಷಿಸಲಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದ ಅಶ್ವಿನಿ ಮತ್ತು ಸಿನಿಮಾ ತಾರೆಯರನ್ನು ಕಾಣಲು ಅಭಿಮಾನಿಗಳು ಸಾಲುಗಟ್ಟಿ ನಿಂತಿದ್ದರು. ಅವರೊಂದಿಗೆ ಸೆಲ್ಫಿಗಾಗಿ ಮುಗಿಬಿದ್ದ ಪ್ರಸಂಗವು ನಡೆಯಿತು.

ಆಚಾರ್​ & ಕೋ ಸಿನಿಮಾ 1960ರ ಕಾಲಘಟ್ಟದಲ್ಲಿ ಬೆಂಗಳೂರಿನಲ್ಲಿ ನಡೆಯುವ ಈ ಕಥೆ. ಸುಸಂಸ್ಕೃತ ಕುಟುಂಬದಲ್ಲಿ ಹತ್ತು ಜನ ಮಕ್ಕಳು ತಮ್ಮ ಕನಸುಗಳನ್ನು ಬೆನ್ನತ್ತುವ ಹಾದಿಯಲ್ಲಿ ಹೇಗೆ ಸವಾಲುಗಳನ್ನು ಎದುರಿಸುತ್ತಾರೆ ಮತ್ತು ಸಂಪ್ರದಾಯಗಳನ್ನೂ ಮೀರದೇ ಆಧುನಿಕ ಜಗತ್ತಿನ ಅವಶ್ಯಕತೆಗಳನ್ನೂ ಹೇಗೆ ನಿಭಾಯಿಸಿ ಗೆಲ್ಲುತ್ತಾರೆ ಎಂಬುದನ್ನು ಹೇಳುವ ಒಂದು ಭಾವನಾತ್ಮಕ ಚಿತ್ರ.

ಇದನ್ನೂ ಓದಿ: Achar & Co: ಬಿಡುಗಡೆಗೆ ಸಿದ್ಧವಾಗಿದೆ ಆಚಾರ್​ & ಕೋ: ಸಿನಿತಾರೆಯರಿಗಾಗಿ ಅಶ್ವಿನಿ ಪುನೀತ್​ ಪ್ರೀಮಿಯರ್​ ಶೋ

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.