ದೇವೇಗೌಡರಿಗೆ ದಸರಾ ಉದ್ಘಾಟನೆಯ ಅವಕಾಶ ಕೊಡುವಂತೆ ಹೆಚ್ ವಿಶ್ವನಾಥ್ ಸಲಹೆ - ದಸರಾ ಉದ್ಘಾಟನೆ
🎬 Watch Now: Feature Video
ಮೈಸೂರು: ಈ ಬಾರಿ ದಸರಾ ಉದ್ಘಾಟನೆಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಆಯ್ಕೆಮಾಡಿ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿ ಇಲ್ಲಿಯವರೆಗೆ ಸಿನಿಮಾ ನಟರು, ಸಾಹಿತಿಗಳು, ಸ್ವಾಮೀಜಿಗಳು ಹಾಗೂ ವಿವಿಧ ಕ್ಷೇತ್ರದ ಗಣ್ಯರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಲಾಗಿದೆ. ಆದರೆ, ಈ ಬಾರಿ ರಾಜ್ಯಕ್ಕೆ ಕೀರ್ತಿ ತಂದ, ದೇಶದ ಪ್ರಧಾನಿಯಾಗಿ, ಮುಖ್ಯಮಂತ್ರಿಯಾಗಿ, ರಾಜಕೀಯ ಮತ್ಸದಿಯಾಗಿರುವ, ರಾಜಕಾರಣದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದ ಹಿರಿಯ ರಾಜಕಾರಣಿ ಹೆಚ್.ಡಿ ದೇವೇಗೌಡ ಅವರನ್ನು ಈ ಬಾರಿ ದಸರಾ ಉದ್ಘಾಟಕರಾಗಿ ನೇಮಕ ಮಾಡಿ ಎಂದು ಸಲಹೆ ನೀಡಿದ್ದಾರೆ.
Last Updated : Feb 3, 2023, 8:26 PM IST