VIDEO: ಸ್ಯಾಂಡಲ್ವುಡ್ ತಾರೆಯರಿಂದ ಭರ್ಜರಿ ಪ್ರಚಾರ.. ರಂಗೇರಿದ ಚುನಾವಣಾ ಕಣ - ETV Bharat kannada News
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/640-480-18372399-thumbnail-16x9-mh123.jpg)
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲ ದಿನಗಳು ಬಾಕಿ ಇರುವಾಗಲೇ ರಾಜ್ಯದಲ್ಲಿ ಬೇಸಿಗೆ ಬಿಸಿಲ ತಾಪಕ್ಕಿಂತ ಚುನಾವಣಾ ಕಾವು ಹೆಚ್ಚಾಗಿದೆ. ಎಲ್ಲ ರಾಜಕೀಯ ಪಕ್ಷಗಳು ಅಧಿಕಾರದ ಚುಕ್ಕಾಣಿ ಹಿಡಿಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಅಷ್ಟೇ ಅಲ್ಲದೇ ಕನ್ನಡ ಚಿತ್ರರಂಗದ ನಟ, ನಟಿಯರು ಸಹ ಪ್ರಚಾರಕ್ಕೆ ಧುಮುಕ್ಕಿದ್ದು, ಚುನಾವಣಾ ಕಣ ಮತ್ತಷ್ಟು ರಂಗೇರಿದೆ.
ಈಗಾಗಲೇ ನಟ ಕಿಚ್ಚ ಸುದೀಪ್ ಸಿಎಂ ಬಸವರಾಜ ಬೊಮ್ಮಾಯಿ ಪರ ರಾಜ್ಯಾದ್ಯಂತ ಪ್ರಚಾರ ನಡೆಸುವುದಾಗಿ ಘೋಷಿಸಿದ್ದಾರೆ. ಮತ್ತೊಂದೆಡೆ ಬಿಜೆಪಿಯಲ್ಲೇ ಗುರುತಿಸಿಕೊಂಡಿರುವ ನಟಿ ಶೃತಿ ರಾಜ್ಯಾದ್ಯಂತ ಕಮಲದ ಪರ ಬ್ಯಾಟ್ ಬೀಸುತ್ತಿದ್ದಾರೆ. ಜೊತೆಗೆ ಚಾಲೆಜಿಂಗ್ ಸ್ಟಾರ್ ದರ್ಶನ್ ಕೂಡ ಆತ್ಮೀಯರ ಪರ ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ. ಅಲ್ಲದೆ, ನಟ ಭುವನ್ ಪೊನಣ್ಣ ಮತ್ತು ನಟಿ ಹರ್ಷಿಕಾ ಪೂಣಚ್ಚಾ ಸಹ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಾರೆ. ನಟ ಸಾಧು ಕೋಕಿಲ ಕಾಂಗ್ರೆಸ್ ಪರ ಮತಯಾಚಿಸುತ್ತಿದ್ದರೆ, ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ, ನಟ ನಿಖಿಲ್ ಕುಮಾರ್ ಪರ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪ್ರಚಾರ ಮಾಡಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಇದನ್ನೂ ಓದಿ : ಅಭ್ಯರ್ಥಿಗಳ ಪರ ಅಖಾಡಕ್ಕಿಳಿದ ಕುಟುಂಬಸ್ಥರು: ಸೋಮಣ್ಣ ಪರ ಪತ್ನಿ ಭರ್ಜರಿ ಪ್ರಚಾರ..