ಭಾರತ ಹುಣ್ಣಿಮೆ ದಿನ, ನಂಜುಂಡೇಶ್ವರ ದೇವಸ್ಥಾನದಲ್ಲಿ ನೂಕುನುಗ್ಗಲು - ದಕ್ಷಿಣ ಕಾಶಿ ಖ್ಯಾತಿಯ ನಂಜನಗೂಡು ನಂಜುಂಡೇಶ್ವರ
🎬 Watch Now: Feature Video
ಮೈಸೂರು: ಭಾರತ ಹುಣ್ಣಿಮೆ ಹಿನ್ನೆಲೆ ಭಾನುವಾರ ನಂಜನಗೂಡಿನ ನಂಜುಂಡೇಶ್ವರ ದೇವರ ದರ್ಶನ ಪಡೆಯಲು ಭಕ್ತರು ಹರಸಾಹಸ ಪಡಬೇಕಾಯಿತು. ದಕ್ಷಿಣ ಕಾಶಿ ಖ್ಯಾತಿಯ ನಂಜನಗೂಡು ನಂಜುಂಡೇಶ್ವರನ ದರ್ಶನ ಪಡೆಯಲು ಭಕ್ತ ಸಾಗರವೇ ಸೇರಿತ್ತು. ಭಾನುವಾರ ಹುಣ್ಣಿಮೆ ಬಂದಿರುವುದರಿಂದ ಶುಭ ದಿನವೆಂದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಅಪಾರ ಸಂಖ್ಯೆಯಲ್ಲಿ ಭಕ್ತರು ನಂಜುಂಡೇಶ್ವರ ದೇವಸ್ಥಾನಕ್ಕೆ ಆಗಮಿಸಿದ್ದರಿಂದ ದರ್ಶನ ಪಡೆಯುವ ವೇಳೆ ನೂಕು ನುಗ್ಗಲು ಉಂಟಾಯಿತು. ಭಕ್ತಾದಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.
ಇದನ್ನೂಓದಿ:ತಪ್ಪಾದ ಔಷಧಿ ಸಿಂಪಡಣೆ: ಕಣ್ಣೆದುರೇ ಕಮರಿದ 4 ಎಕರೆ ದ್ರಾಕ್ಷಿ ಬೆಳೆ, ಆತ್ಮಹತ್ಯೆಗೆ ಶರಣಾದ ರೈತ
Last Updated : Feb 6, 2023, 4:07 PM IST