ಪೋಷಕರಾದ ರಾಮ್ ಚರಣ್ - ಉಪಾಸನಾ ದಂಪತಿ: ಅಪೋಲೋ ಆಸ್ಪತ್ರೆಯಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ - Hyderabad Apollo Hospital
🎬 Watch Now: Feature Video
ಹೈದರಾಬಾದ್ (ತೆಲಂಗಾಣ): ತೆಲುಗು ಚಿತ್ರರಂಗದ ಬಹು ಬೇಡಿಕೆಯ ನಟ, ಸೂಪರ್ ಹಿಟ್ ಆರ್ಅರ್ಆರ್ ಖ್ಯಾತಿಯ ರಾಮ್ ಚರಣ್ ತಂದೆ ಆಗಿದ್ದಾರೆ. ಪತ್ನಿ ಉಪಾಸನಾ ಇಂದು ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಹಿನ್ನೆಲೆ ಮೆಗಾಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಸಂಭ್ರಮದ ವಾತಾವರಣವಿದೆ.
ಮೆಗಾಸ್ಟಾರ್ ಚಿರಂಜೀವಿ ಪುತ್ರ ರಾಮ್ ಚರಣ್ ಮತ್ತು ಉಪಾಸನಾ ಕಾಮಿನೇನಿ 2012ರಲ್ಲಿ ದಾಂಪತ್ಯ ಜೀವನ ಆರಂಭಿಸಿದರು. ಸುಮಾರು 10 ವರ್ಷಗಳ ಬಳಿಕ ಅಂದರೆ ಕಳೆದ ವರ್ಷ ಡಿಸೆಂಬರ್ 12ರಂದು ತಾವು ಪೋಷಕರಾಗುತ್ತಿದ್ದೇವೆ ಎಂಬ ಶುಭ ಸುದ್ದಿಯನ್ನು ಹಂಚಿಕೊಂಡಿದ್ದರು. ಇಂದು ಬೆಳಗ್ಗೆ ಹೈದರಾಬಾದ್‌ನ ಜುಬಿಲಿ ಹಿಲ್ಸ್ ನಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಉಪಾಸನಾ ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಮತ್ತು ತಾಯಿ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಮಾಹಿತಿ ನೀಡಿದೆ. ಈ ಹಿನ್ನೆಲೆ ನಟ ರಾಮ್ ಚರಣ್ ಅವರ ಅಭಿಮಾನಿಗಳು ಮತ್ತು ಆಸ್ಪತ್ರೆಯ ಸಿಬ್ಬಂದಿ ಕೇಕ್ ಕತ್ತರಿಸುವ ಮೂಲಕ ಸಂಭ್ರಮವನ್ನು ಆಚರಿಸಿದ್ದಾರೆ.
ಇದನ್ನೂ ಓದಿ: ಮೆಗಾ ಫ್ಯಾಮಿಲಿಯಲ್ಲಿ ಸಂಭ್ರಮ.. ತಂದೆ - ತಾಯಿ ಆದ ರಾಮಚರಣ್ - ಉಪಾಸನಾ ದಂಪತಿ