ಯುಪಿಯಲ್ಲಿ 'ಜೈಲರ್' ವಿಶೇಷ ಪ್ರದರ್ಶನ: ನಾಳೆ ಅಯೋಧ್ಯೆಗೆ ಸೂಪರ್ಸ್ಟಾರ್ ರಜನಿಕಾಂತ್ ಭೇಟಿ - etv bharat kannada
🎬 Watch Now: Feature Video
ದೇಶ ಮಾತ್ರವಲ್ಲದೇ, ವಿಶ್ವದಾದ್ಯಂತ ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ ಸೂಪರ್ಸ್ಟಾರ್ ರಜನಿಕಾಂತ್ ಅಭಿನಯದ 'ಜೈಲರ್' ಸಿನಿಮಾಗೆ ನಿರೀಕ್ಷೆಗೂ ಮೀರಿದ ಹಿಟ್ ಸಿಕ್ಕಿದೆ. ಚಿತ್ರದ ಯಶಸ್ಸಿನ ಖುಷಿಯಲ್ಲಿರುವ ತಲೈವಾ ನಾಳೆ (ಭಾನುವಾರ) ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಭಗವಾನ್ ಶ್ರೀರಾಮನ ಜನ್ಮಸ್ಥಳಕ್ಕೆ ತೆರಳಲು ರಜನಿ ಉತ್ಸುಕರಾಗಿದ್ದಾರೆ. ಈ ಬಗ್ಗೆ ಅವರೇ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಶನಿವಾರ ಉತ್ತರಪ್ರದೇಶದ ಲಕ್ನೋದಲ್ಲಿ 'ಜೈಲರ್' ಸಿನಿಮಾ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ತಲೈವಾ ಶುಕ್ರವಾರ ರಾತ್ರಿ ಲಕ್ನೋ ತಲುಪಿದ್ದಾರೆ. ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಚಿತ್ರದ ಸ್ಕ್ರೀನಿಂಗ್ನಲ್ಲಿ ಭಾಗವಹಿಸಿದ್ದರು. ಈ ವೇಳೆ ರಜನಿಕಾಂತ್, ತಮ್ಮ ಚಿತ್ರಕ್ಕೆ ಪ್ರೇಕ್ಷಕರಿಂದ ಸಿಗುತ್ತಿರುವ ಸಕಾರಾತ್ಮಕ ಪ್ರತಿಕ್ರಿಯೆ ಮತ್ತು ಚಿತ್ರದ ಯಶಸ್ಸಿನ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದರು.
ಇದಕ್ಕೂ ಮುನ್ನ ಶುಕ್ರವಾರ ರಜನಿ ಜಾರ್ಖಂಡ್ನ ರಾಂಚಿಯಲ್ಲಿದ್ದರು. ರಾಜ್ಯದ ಪ್ರಸಿದ್ಧ ಚಿನ್ನಮಸ್ತ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಬಳಿಕ ರಾಂಚಿಯ 'ಯಾಗೋದ ಆಶ್ರಮ'ದಲ್ಲಿ ಒಂದು ಗಂಟೆ ಧ್ಯಾನ ಕೈಗೊಂಡಿದ್ದರು. ನಂತರ ಜಾರ್ಖಂಡ್ನ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರನ್ನು ರಾಜಭವನದಲ್ಲಿ ಭೇಟಿಯಾಗಿದ್ದರು.
ಇದನ್ನೂ ಓದಿ: 'ಜೈಲರ್'ಗೆ ಯಶಸ್ಸಿನ ಅಭಿಷೇಕ: ಎಂಟನೇ ದಿನವೂ ಉತ್ತಮ ಕಲೆಕ್ಷನ್ ಮಾಡಿದ ರಜನಿ ಸಿನಿಮಾ
TAGGED:
Superstar Rajinikanth