ಸಿಬಿಎಫ್ಸಿ ವಿರುದ್ಧ ಭ್ರಷ್ಟಾಚಾರ ಆರೋಪ: ಹೆಚ್ಚಿನ ಮಾಹಿತಿ ಹಂಚಿಕೊಂಡ ತಮಿಳು ನಟ ವಿಶಾಲ್! - ಸಿಬಿಎಫ್ಸಿ ಲಂಚ
🎬 Watch Now: Feature Video
Published : Sep 29, 2023, 6:22 PM IST
ತಮಿಳು ನಟ ವಿಶಾಲ್ ಅವರು ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿ (Central Board of Film Certification) ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸಿದ್ದಾರೆ. ತಮ್ಮ ಮಾರ್ಕ್ ಆ್ಯಂಟೋನಿ ಸಿನಿಮಾದ ಹಿಂದಿ ಆವೃತ್ತಿಗೆ ಒಪ್ಪಿಗೆ ಪಡೆಯಲು ಸಿಬಿಎಫ್ಸಿಗೆ 6.5 ಲಕ್ಷ ರೂಪಾಯಿ ಪಾವತಿಸಬೇಕಾಯಿತು ಎಂದು ಆರೋಪಿಸಿದ್ದಾರೆ.
ತಮ್ಮ ಸಿನಿಮಾದ ಸ್ಕ್ರೀನಿಂಗ್‌ಗೆ 3 ಲಕ್ಷ ರೂ. ಮತ್ತು ಪ್ರಮಾಣಪತ್ರಕ್ಕಾಗಿ 3.5 ಲಕ್ಷ ರೂ. ಅನ್ನು ಎರಡು ಹಂತಗಳಲ್ಲಿ ಪಾವತಿಸಲಾಗಿದೆ ಎಂದು ನಟ ಆರೋಪಿಸಿದ್ದಾರೆ. ನಿನ್ನೆ X ಖಾತೆಯಲ್ಲಿ ವಿಡಿಯೋ ಸಂದೇಶ ಹರಿಬಿಟ್ಟಿದ್ದ ನಟ ಇಂದು ಮಾಧ್ಯಮಗಳೆದುರು ಪ್ರಕರಣದ ಬಗ್ಗೆ ಮತ್ತಷ್ಟು ವಿವರಣೆ ನೀಡಿದ್ದಾರೆ. ಈ ಬಗ್ಗೆ ಶೀಘ್ರವೇ ತನಿಖೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಲ್ಲಿ ಒತ್ತಾಯಿಸಿದ್ದಾರೆ. ಬಿಡುಗಡೆಗೆ ಪ್ರಮಾಣಪತ್ರ ನೀಡಲು ಲಂಚ ಕೇಳಿದ ವ್ಯಕ್ತಿಯ ಹೆಸರನ್ನು ಉಲ್ಲೇಖಿಸಿದ್ದು, ಸಂವಾದ ರೆಕಾರ್ಡ್ ಆಗಿದೆ ಎಂದೂ ಅವರು ತಿಳಿಸಿದ್ದಾರೆ. ನಟ ಪ್ರಕರಣದ ಬಗ್ಗೆ ವಿವರಣೆ ನೀಡಿದ್ದು, ಮಾಹಿತಿ ಈ ವಿಡಿಯೋದಲ್ಲಿದೆ.
ಇದನ್ನೂ ಓದಿ: 'ವಿಶಾಲ್ ಸಿಬಿಎಫ್ಸಿ ಚಿತ್ರಣ ತೆರೆದಿಟ್ಟಿದ್ದಾರೆ, ಭ್ರಷ್ಟಾಚಾರ ನಡೆಯುತ್ತಿದೆ': ಮಾಜಿ ಅಧ್ಯಕ್ಷ ಪಹ್ಲಾಜ್ ನಿಹಲಾನಿ!