ಚಲಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಸುಟ್ಟು ಭಸ್ಮ! - ಚಲಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಸುಟ್ಟು ಭಸ್ಮ
🎬 Watch Now: Feature Video
ತುಮಕೂರು: ಚಲಿಸುತ್ತಿದ್ದ ಕಾರಿನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಹೊಸಕೆರೆ ಸಮೀಪ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ತಕ್ಷಣ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ನಾಗೇಂದ್ರ ಎಂಬುವರ ಕುಟುಂಬ ಗೌರಿ-ಗಣೇಶ ಹಬ್ಬಕ್ಕೆಂದು ಆಂಧ್ರ ಪ್ರದೇಶದ ರೊಳ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.