ಗ್ರಾಮದೇವತೆ ಊರುಡಮ್ಮ ದೇವಾಲಯ ಜೀರ್ಣೋದ್ಧಾರ ಮತ್ತು ಮೂರ್ತಿ ಪ್ರತಿಷ್ಠಾಪನೆ - ಗ್ರಾಮದೇವತೆ ಊರುಡಮ್ಮ ದೇವಿ
🎬 Watch Now: Feature Video
ಗುರುಮಠಕಲ್ : ಗುರುಮಠಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡ ಗ್ರಾಮದೇವತೆ ಊರುಡಮ್ಮ ದೇವಿಯ ಮೂರ್ತಿ ಪ್ರತಿಷ್ಠಾಪನೆ ಮತ್ತು ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮಗಳು ವಿಜೃಂಭಣೆಯಿಂದ ಸಂಪನ್ನಗೊಂಡವು. ಆಚಾರ್ಯ ರಮೇಶ ಪೂಜಾರ ಅವರ ನೇತೃತ್ವದಲ್ಲಿ ನಡೆದ ಪೂಜಾ ವಿಧಿ- ವಿಧಾನಗಳಿಂದ ದೇವಿಯ ಮೂರ್ತಿ ಪ್ರತಿಷ್ಠಾಪನೆಗೊಂಡು ಹೋಮದ ಪೂರ್ಣಾಹುತಿಗಳು ನಡೆದವು. ನಂತರ ದೇವಿಗೆ ವಿಶೇಷ ಅಭಿಷೇಕ ಹಾಗೂ ಅಲಂಕಾರ ಪೂಜೆಗಳನ್ನು ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ತೊನಸನಹಳ್ಳಿಯ ಷ.ಬ್ರ.ರೇವಣಸಿದ್ದ ಚರಂತೇಶ್ವರ ಶಿವಾಚಾರ್ಯ ಶ್ರೀಗಳು ಮತ್ತು ಖಾಸಾಮಠದ ಶ್ರೀ ಶಾಂತವೀರ ಗುರು ಮುರುಘ ರಾಜೇಂದ್ರ ಸ್ವಾಮಿಗಳು ಭಾಗವಹಿಸಿ ಆಶೀರ್ವಚನ ನೀಡಿದರು.
Last Updated : Feb 3, 2023, 8:11 PM IST