ಅಮೆರಿಕದಲ್ಲಿ ಹೆಚ್ಚುತ್ತಿರುವ ಗುಂಡಿನ ದಾಳಿ ಪ್ರಕರಣಗಳು: ಆರೋಪಿ ಸೇರಿ 7 ಜನ ಸಾವು - Multiple people dead in Milwaukee,
🎬 Watch Now: Feature Video

ಅಮೆರಿಕದ ಮಿಲ್ವಾಕಿ ನಗರದಲ್ಲಿ ಗುಂಡಿನ ದಾಳಿ ನಡೆದಿದೆ. ವ್ಯಕ್ತಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಆರು ಜನ ಸಾವನ್ನಪ್ಪಿದ್ದರು. ಬಳಿಕ ಆರೋಪಿಯೂ ಸಹ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೆಲ್ಸನ್ ಕೂರ್ಸ್ ಬಿರ್ಲ್ ಕಂಪನಿಯಲ್ಲಿ ಆರೋಪಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಕೆಲಸದಿಂದ ತೆಗೆದು ಹಾಕಲಾಗಿತ್ತು. ಇದರಿಂದ ಮನಸ್ತಾಪಗೊಂಡ ಆರೋಪಿ ಸಹದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿ ಬಳಿಕ ತಾನೂ ಸಹ ಆತ್ಮಹತ್ಯೆಗೆ ಶರಣಾಗಿದ್ದಾನೆ.