ಕುಡಿದ ಮತ್ತಿನಲ್ಲಿ ಮಹಿಳೆಯ ಮೇಲೆ ಕಾರು ಹರಿಸಿದ ಸಬ್ ಇನ್ಸ್ಪೆಕ್ಟರ್! ವಿಡಿಯೋ - ಪೊಲೀಸ್ ಸಬ್ ಇನ್ಸ್ಪೆಕ್ಟರ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7887375-thumbnail-3x2-megha.jpg)
ನವದೆಹಲಿ: ಜನರಕ್ಷಕನೇ ಜನರ ಜೀವ ಕಳೆಯುವಂತಹ ಕೆಲಸ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ದೆಹಲಿಯ ಚಿಲ್ಲಾ ಎಂಬ ಗ್ರಾಮದಲ್ಲಿ ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೇಲೆ ಮದ್ಯ ಸೇವಿಸಿದ ಮತ್ತಿನಲ್ಲಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಾರು ಹರಿಸಿ ದರ್ಪ ಮೆರೆದಿದ್ದಾನೆ. ಆರೋಪಿ ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿದೆ. ಮಹಿಳೆಯ ಪರಿಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.