ಕುಸಿತಗೊಂಡ 100 ವರ್ಷಗಳ ಹಳೆಯ ಕಟ್ಟಡ: ವಾಹನಗಳು ಜಖಂ - ಈಟಿವಿ ಭಾರತ್ ಕನ್ನಡ ನ್ಯೂಸ್
🎬 Watch Now: Feature Video
ಅಮೃತಸರ (ಪಂಜಾಬ್) : ಜಿಲ್ಲೆಯ ಕತ್ರಾ ಅಹ್ಲುವಾಲಿಯಾ ಎಂಬಲ್ಲಿ 100 ವರ್ಷದ ಹಳೆಯ ಕಟ್ಟಡವೊಂದು ಸಂಪೂರ್ಣ ಕುಸಿದು ಬಿದ್ದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಟ್ಟಡದ ಕೆಳಗೆ ನಿಲ್ಲಿಸಿದ್ದ ವಾಹನಗಳು ಸಂಪೂರ್ಣ ಜಖಂ ಆಗಿದ್ದು, ರಸ್ತೆ ಕೂಡ ಬಂದ್ ಆಗಿದೆ. ಶಿಥಿಲಾವಸ್ಥೆಯಲ್ಲಿ ನಿಂತಿದ್ದ ಕಟ್ಟಡ ದುಃಸ್ಥಿತಿಯ ಕುರಿತು ಹಲವು ಬಾರಿ ಆಡಳಿತ ಮಂಡಳಿಗೆ ಮಾಹಿತಿ ನೀಡಿದರೂ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.
ಕುಸಿತಗೊಂಡ ಕಟ್ಟಡ ಐದು ಅಂತಸ್ತಿನ ಕಟ್ಟಡವಾಗಿದ್ದು, ಇದರ ಮಾಲೀಕರು ಕೋಲ್ಕತ್ತಾದಲ್ಲಿ ವಾಸಿಸುತ್ತಿದ್ದಾರೆ. ಈ ಕಟ್ಟಡ ಒಂದೇ ಅಲ್ಲದೆ, ಇನ್ನೂ ಕೆಲವು ಕಟ್ಟಡಗಳು ಅತ್ಯಂತ ಶಿಥಿಲಾವಸ್ಥೆಯಲ್ಲಿದ್ದು, ಯಾವಾಗ ಕುಸಿದು ಬೀಳುತ್ತವೆ ಎಂಬುದು ಗೊತ್ತಿಲ್ಲ. ಮುಂದೆ ಆಗುವ ಅನಾಹುತಗಳನ್ನು ತಪ್ಪಿಸಲು ಈ ಕಟ್ಟಡಗಳ ಬಗ್ಗೆಯೂ ಆಡಳಿತ ಮಂಡಳಿ ಗಮನ ಹರಿಸಬೇಕಿದೆ. ಕಟ್ಟಡ ಕುಸಿದು ಬಿದ್ದಿರುವುದರಿಂದ ಅಕ್ಕಪಕ್ಕದ ಮನೆಗಳಿಗೂ ಸಾಕಷ್ಟು ಹಾನಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಇದನ್ನೂ ಓದಿ : ಗುಜರಾತ್ನಲ್ಲಿ ಮಳೆಗೆ ಕಟ್ಟಡಗಳ ಕುಸಿತ: ಜುನಾಗಢದಲ್ಲಿ ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಸಾವು, ಅಹಮದಾಬಾದ್ನಲ್ಲಿ 9 ಮಂದಿ ರಕ್ಷಣೆ