ಮಳವಳ್ಳಿ ಬಳಿ ಭೀಕರ ರಸ್ತೆ ಅಪಘಾತ.. ಇಬ್ಬರು ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ - mandya crime news

🎬 Watch Now: Feature Video

thumbnail

By

Published : Apr 12, 2023, 1:29 PM IST

ಮಂಡ್ಯ: ಕಾರು ಮತ್ತು ಗೂಡ್ಸ್​ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರ ಸಾವನ್ನಪ್ಪಿದ್ದು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿ ಗ್ರಾಮದ ಬಳಿ ನಡೆದಿದೆ. ಕಾರು ಮತ್ತು ಬೊಲೆರೊ ಗೂಡ್ಸ್ ವಾಹನ ನಡುವೆ ಈ ದುರ್ಘಟನೆ ಸಂಭವಿಸಿದೆ.  

ಘಟನೆಯಲ್ಲಿ ಮದಲಿಯಮ್ಮ(50), ಜೋಸ್ಮಿನ್ ಮೇರಿ(60) ಎಂಬುವರು ಮೃತಪಟ್ಟಿದ್ದಾರೆ. ಇವರು ಕೊಳ್ಳೇಗಾಲ ತಾಲ್ಲೂಕಿನ ಶಿಂಷಾ ಬಳಿಯ ಜಾಗೇರಿ ಗ್ರಾಮದ ಮೂಲದವರಾಗಿದ್ದಾರೆ. ಶಿಂಷಾದ ಮಾರಮ್ಮ ದೇವಸ್ಥಾನದಿಂದ ವಾಪಸ್ಸಾಗುತ್ತಿದ್ದಾಗ ವೇಳೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಗಾಯಾಳುಗಳನ್ನು ಮಳವಳ್ಳಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಳವಳ್ಳಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಎಲ್ಲಾ ಗಾಯಾಳುಗಳನ್ನು ಮಂಡ್ಯ ಜಿಲ್ಲಾಸ್ಪತ್ರೆ (ಮಿಮ್ಸ್)​ಗೆ ರವಾನೆ ಮಾಡಲಾಗಿದೆ. ಈ ಕುರಿತು ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಡಿವೈಡರ್​ಗೆ ಗುದ್ದಿ ಪಲ್ಟಿಯಾದ ಬಸ್​.. 15 ಪ್ರಯಾಣಿಕರಿಗೆ ಗಾಯ: ಭೀಕರ ವಿಡಿಯೋ

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.