ಬಿಡಿಎ ಕಾರ್ಯಾಚರಣೆ: ಹೆಚ್ಎಸ್ಆರ್ ಬಡಾವಣೆಯ 20 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶಕ್ಕೆ - ಈಟಿವಿ ಭಾರತ ಕನ್ನಡ
🎬 Watch Now: Feature Video

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಬುಧವಾರ ನಡೆಸಿದ ಕಾರ್ಯಾಚರಣೆಯಲ್ಲಿ ಹೆಚ್ಎಸ್ಆರ್ ಒಂದನೇ ಸೆಕ್ಟರ್ನಲ್ಲಿ ಸುಮಾರು 20 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.
ಅಗರ ಗ್ರಾಮದ ಸರ್ವೇ ನಂ.74, ಹೆಚ್ಎಸ್ಆರ್ ಒಂದನೇ ಸೆಕ್ಟರ್ನಲ್ಲಿ ಬಿಡಿಎಗೆ ಸೇರಿದ್ದ 15 ಗಂಟೆ ಜಾಗದಲ್ಲಿ ತಲೆ ಎತ್ತಿದ್ದ ಅನಧಿಕೃತ ಶೆಡ್ಗಳನ್ನು ತೆರವುಗೊಳಿಸಲಾಗಿದೆ. ಇತ್ತೀಚೆಗೆ ಬಿಡಿಎ ಅಧ್ಯಕ್ಷ ಎಸ್.ಆರ್ ವಿಶ್ವನಾಥ್ ಅವರು ಸ್ಥಳ ಪರಿಶೀಲನೆ ನಡೆಸಿ ಜಾಗವನ್ನು ವಶಕ್ಕೆ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕಾರ್ಯಾಚರಣೆಯನ್ನು ಬಿಡಿಎ ಆಯುಕ್ತ ಕುಮಾರ ನಾಯಕ ಅವರ ಆದೇಶದನ್ವಯ ಬಿಡಿಎ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕ ನಂಜುಂಡೇಗೌಡ, ಡಿವೈಎಸ್ಪಿ ಮಲ್ಲೇಶ್, ಇನ್ಸ್ಪೆಕ್ಟರ್ ಮುತ್ತುರಾಜ್ ಹಾಗೂ ಕಾರ್ಯಪಾಲಕ ಅಭಿಯಂತರ ಮಹದೇವ ಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಜಾಗವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು; ನಾಲ್ವರ ಪ್ರಾಣ ಉಳಿಸಿತು ಸೀಟ್ ಬೆಲ್ಟ್ - ವಿಡಿಯೋ