ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ ನಾಲ್ವರ ಸಾವು - ಮೂವರು ಮಕ್ಕಳು ಸೇರಿ ನಾಲ್ವರು ಸಾವು

🎬 Watch Now: Feature Video

thumbnail

By ETV Bharat Karnataka Team

Published : Dec 2, 2023, 10:46 PM IST

ಜೈಪುರ, ರಾಜಸ್ಥಾನ: ಕಾರು ಮತ್ತು ಅಪರಿಚಿತ ವಾಹನದ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಒಬ್ಬ ಯುವಕ, ಮೂವರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಒಟ್ಟು 8 ಮಂದಿ ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಇಲ್ಲಿನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಮೂವರು ಮಹಿಳೆಯರು, ಒಬ್ಬ ಯುವಕ, 8 ಮಂದಿ ಮಕ್ಕಳು ಸೇರಿ ಒಟ್ಟು 12 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಇವರೆಲ್ಲರೂ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ವಾಪಸ್​ ಆಗುತ್ತಿದ್ದರು ಎಂದು ತಿಳಿದು ಬಂದಿದೆ.

ಶುಕ್ರವಾರ ರಾತ್ರಿ ದುಂಗಾಗಢ್​ನಿಂದ ಬದನೌ ಕಡೆಗೆ ಬರುತ್ತಿದ್ದ ಸ್ವಿಫ್ಟ್​ ಕಾರಿಗೆ ಸರ್ದಾರ್​​ ಶಹರ್ ಪೊಲೀಸ್​ ಠಾಣಾ ವ್ಯಾಪ್ತಿಯ ಅಸಾಸರ್​ನ ಬಿಕನೇರ್​ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಬಳಿಕ ಅಪರಿಚಿತ ವಾಹನ ಸ್ಥಳದಿಂದ ಪರಾರಿಯಾಗಿದೆ. ಡಿಕ್ಕಿ  ಹೊಡೆದ ರಭಸಕ್ಕೆ ಕಾರಿನಲ್ಲಿ ಮೂವರು ಮಕ್ಕಳು ಮತ್ತು ಓರ್ವ ಯುವಕ ಸಾವನ್ನಪ್ಪಿದ್ದಾನೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಈಜಿಪ್ಟ್​ನಿಂದ ಬಂದ ಹಡಗಿನಲ್ಲಿ 200 ಕೋಟಿ ಮೌಲ್ಯದ ಕೊಕೇನ್​ ಪತ್ತೆ!

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.