ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಮನೆಗೆ ಬೆಂಕಿ : ನಾಲ್ಕು ಜನರಿಗೆ ಗಂಭೀರ ಗಾಯ - ಮನೆಗಳಲ್ಲಿ ಬೆಂಕಿ ಅವಘಡ
🎬 Watch Now: Feature Video
ಥಾಣೆ (ಮಹಾರಾಷ್ಟ್ರ): ಎರಡು ಮನೆಗಳಲ್ಲಿ ಬೆಂಕಿ ಅವಘಡ ಸಂಭವಿಸಿ 4 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಇಲ್ಲಿಯ ಶಿವಾಜಿ ನಗರದಲ್ಲಿ ನಡೆದಿದೆ. ಹೈಟನ್ಷನ್ ವಿದ್ಯುತ್ ತಂತಿ ತಗುಲಿದ ಪರಿಣಾಮ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪ್ರಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ವಿಷಯ ತಿಳಿಯುತ್ತಿದ್ದಂತೆ ನಾಲ್ಕು ಅಗ್ನಿಶಾಮಕ ದಳ ವಾಹನಗಳು ಸ್ಥಳಕ್ಕಾಗಮಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟರು. ಎರಡು ಮನೆಗಳಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಮುನ್ನೆಚ್ಚರಿಕೆ ಕ್ರಮವಾಗಿ ಅಕ್ಕ ಪಕ್ಕ ಮನೆಯಲ್ಲಿದ್ದ ಜನರನ್ನು ಮನೆ ಬಿಟ್ಟು ಹೊರ ಬರುವಂತೆ ಅಧಿಕಾರಿಗಳು ತಿಳಿಸಿದ್ದರು. ಅದರಂತೆ ಪಕ್ಕದ ಮನೆಯ ಬೆಂಕಿ ನಂದಿಸುವವರೆಗೂ ಮನೆ ಬಿಟ್ಟು ಹೊರ ಬಂದಿದ್ದರು.
ಫೋಮ್ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಉತ್ತರ ಪ್ರದೇಶದ ಬರೇಲಿಯದ ಅಶೋಕ ಫೋಮ್ ಫ್ಯಾಕ್ಟರಿಯಲ್ಲಿ ಕೆಲದಿನಗಳ ಹಿಂದೆ ಅಗ್ನಿ ಅವಘಡ ಸಂಭವಿಸಿ ನಾಲ್ವರು ಕಾರ್ಮಿಕರು ಸಜೀವ ದಹನವಾಗಿದ್ದರು. ಆರು ಮಂದಿ ಕಾರ್ಮಿಕರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ತೀವ್ರ ಗಾಯಗೊಂಡಿದ್ದರು.
ಇದನ್ನೂ ಓದಿ: ಫೋಮ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ: ನಾಲ್ವರು ಕಾರ್ಮಿಕರು ಸಾವು, 6 ಮಂದಿಯ ಸ್ಥಿತಿ ಗಂಭೀರ