ದಕ್ಷಿಣ ಒಳನಾಡಿನಲ್ಲಿ 5 ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ - todays weather report

🎬 Watch Now: Feature Video

thumbnail

By

Published : Mar 29, 2023, 8:33 PM IST

ಬೆಂಗಳೂರು: ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 5 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವಿಜ್ಞಾನಿ ಎ ಪ್ರಸಾದ್ ಹೇಳಿದ್ದಾರೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮಂಡ್ಯ, ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ, ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಗುಡುಗು ಸಹಿತ ಮಳೆಯಾಗುವ ಸಾಧ್ಯತೆ : ಬೆಂಗಳೂರು ನಗರದಲ್ಲಿ ಮುಂದಿನ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ. ಇಂದು ಕೂಡ ಮೋಡ ಕವಿದ ವಾತಾವರಣ ಹಾಗೂ ಗಾಳಿಯ ಪ್ರಮಾಣ ಹೆಚ್ಚಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. 

ಕಲಬುರಗಿಯಲ್ಲಿ ಅತಿ ಹೆಚ್ಚು ಉಷ್ಣಾಂಶ : ಕಲಬುರಗಿಯಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ 12.2 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಮಾನ ವಿಜ್ಞಾನಿ ಪ್ರಸಾದ್ ಮಾಹಿತಿ ನೀಡಿದ್ದಾರೆ. 

ಇದನ್ನೂ ಓದಿ : ನಾಗಾರ್ಜುನ ಕಾಲೇಜಿನಲ್ಲಿ ಸಂಭ್ರಮದ ಯುವೋತ್ಸವ ಆಚರಣೆ.. 2 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ 

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.