ಅಬಕಾರಿ ಇಲಾಖೆಯ ಭರ್ಜರಿ ಕಾರ್ಯಾಚರಣೆ ಬರೋಬ್ಬರಿ 54 ಲಕ್ಷ ಮೌಲ್ಯದ ಮದ್ಯ ವಶ - election update

🎬 Watch Now: Feature Video

thumbnail

By

Published : Mar 29, 2023, 10:41 PM IST

ನೆಲಮಂಗಲ: ಕರ್ನಾಟಕ ವಿಧಾನಸಭಾ ಚುನಾವಣೆ ನಿಗದಿಯಾಗಿದ್ದು, ಬುಧವಾರ(ಮಾ.29)ದಿಂದ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಈ ಹಿನ್ನೆಲೆ ರಾಜ್ಯ ಅಬಕಾರಿ ಇಲಾಖೆ ಹೈ ಅಲರ್ಟ್ ಆಗಿದ್ದು, ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಅದರಲ್ಲೂ ರಾಷ್ಟ್ರೀಯ ಹೆದ್ದಾರಿಯ ಗಡಿ ಭಾಗಗಳಲ್ಲಿ ಮುನ್ನೆಚ್ಚರಿಕೆ ವಹಿಸಿ ಚೆಕ್​ಪೋಸ್ಟ್​ಗಳನ್ನು ನಿರ್ಮಿಸಿ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಅಬಕಾರಿ ಉಪ ಆಯುಕ್ತರಾದ ನಾಗೇಶ್ ಕುಮಾರ್ ಹಾಗೂ ಅಬಕಾರಿ ಉಪಾಧೀಕ್ಷರಾದ ಪರಮೇಶ್ವರಪ್ಪ ಮತ್ತು‌ ಸಿಬ್ಬಂದಿಗಳು ಗಸ್ತು‌ ತಿರುಗುವ ಸಮಯದಲ್ಲಿ ದಾಬಸ್​​ಪೇಟೆ ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಲಾರಿ ತಡೆದು ಪರಿಶೀಲನೆ ನಡೆಸಿದಾಗ ಡ್ರೈವರ್ ಕ್ಯಾಬಿನ್​ನಲ್ಲಿ ಇದ್ದ 18 ಲೀಟರ್ ಮದ್ಯ ಹಾಗೂ 30 ಸಾವಿರ ಲೀಟರ್​ನಷ್ಟು ಸ್ಪಿರಿಟ್ ಪತ್ತೆಯಾಗಿತ್ತು. ಯಾವುದೇ ನೈಜ ದಾಖಲೆಗಳು ಕಂಡುಬರದೇ ಇದ್ದ ಕಾರಣ ವಾಹನ ಸಮೇತ ಚಾಲಕ ಶ್ರೀಧರ್​ನನ್ನು ವಶಕ್ಕೆ ಪಡೆಯಾಲಾಗಿದ್ದು, ವಶಪಡಿಸಿಕೊಂಡ ಮದ್ಯದ ಮೌಲ್ಯ 54 ಲಕ್ಷ ರೂ. ಎಂದು ಅಂದಾಜಿಸಲಾಗಿದ್ದು, ನೆಲಮಂಗಲ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಇಂದಿನಿಂದ ನೀತಿ ಸಂಹಿತೆ ಜಾರಿ.. ಗಡಿಭಾಗದ ಚೆಕ್ ಪೋಸ್ಟ್​​ಗಳಲ್ಲಿ ಅಧಿಕಾರಿಗಳು ಅಲರ್ಟ್

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.