ದಾವಣಗೆರೆಯಲ್ಲಿ ಸೊಂಟಕ್ಕೆ ನೋಟು ಕಟ್ಟಿಕೊಂಡು ಸಾಗಣೆ: ಇಬ್ಬರನ್ನ ವಶಕ್ಕೆ ಪಡೆದ ಪೊಲೀಸರು - ಈಟಿವಿ ಭಾರತ ಕನ್ನಡ
🎬 Watch Now: Feature Video
ದಾವಣಗೆರೆ: ದ್ವಿಚಕ್ರವಾಹನದಲ್ಲಿ ಸೊಂಟದ ಸುತ್ತ ಹಣ ಕಟ್ಟಿಕೊಂಡು ಅಕ್ರಮವಾಗಿ ಹಣ ಸಾಗಣೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಜೀನಹಳ್ಳಿ ಚೆಕ್ಪೋಸ್ಟ್ನಲ್ಲಿ ನಡೆದಿದೆ. ಈ ಸಂಬಂಧ ಬೈಕ್ನಲ್ಲಿ ತೆರಳುತ್ತಿದ್ದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಮೂಲದ ಸೈಫುಲ್ಲಾ ಮತ್ತು ಕುಮಾರ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಂದ ಸುಮಾರು 7.5 ಲಕ್ಷ ರೂಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಕಳೆದ ಬುಧವಾರ ತಡರಾತ್ರಿ 12 ಗಂಟೆ ಸುಮಾರಿಗೆ ಇಲ್ಲಿನ ಜೀನಹಳ್ಳಿ ಚೆಕ್ಪೋಸ್ಟ್ನಲ್ಲಿ ಪೊಲೀಸರು ಮತ್ತು ಅಧಿಕಾರಿಗಳು ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು. ಈ ವೇಳೆ, ದ್ವಿಚಕ್ರ ವಾಹನದಲ್ಲಿ ಇಬ್ಬರು ಬಂದಿದ್ದು, ಇವರ ವರ್ತನೆಯಿಂದ ಅನುಮಾನಗೊಂಡ ಪೊಲೀಸರು ತಪಾಸಣೆ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ತಮ್ಮ ಸೊಂಟದ ಸುತ್ತ ಹಣವನ್ನು ಕಟ್ಟಿಕೊಂಡು ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ. ಈ ವೇಳೆ, ಅಧಿಕಾರಿಗಳು ಆರೋಪಿಗಳಲ್ಲಿ ಸೂಕ್ತ ದಾಖಲೆಗಳನ್ನು ಒದಗಿಸುವಂತೆ ಕೋರಿದ್ದು, ಆರೋಪಿಗಳು ಯಾವುದೇ ದಾಖಲೆಗಳನ್ನು ನೀಡದಿರುವ ಕಾರಣ ಹಣವನ್ನು ಜಪ್ತಿ ಮಾಡಿದ್ದಾರೆ.
ಇದನ್ನೂ ಓದಿ : ದೇವನಹಳ್ಳಿ: ಸ್ನಾನಗೃಹದ ಗೋಡೆ ಕುಸಿದು ಮಹಿಳೆ ಸಾವು