ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು - ಕಾರಿಗೆ ಬೆಂಕಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/09-09-2023/640-480-19470400-thumbnail-16x9-merg.jpg)
![ETV Bharat Karnataka Team](https://etvbharatimages.akamaized.net/etvbharat/prod-images/authors/karnataka-1716535795.jpeg)
Published : Sep 9, 2023, 8:04 PM IST
ಮಂಡ್ಯ: ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಹೊತ್ತಿ ಉರಿದಿರುವ ಘಟನೆ ಶ್ರೀ ರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಗೇಟ್ ಬಳಿ ಶನಿವಾರ ನಡೆದಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರು ಬೆಂಕಿಗೆ ಸಂಪೂರ್ಣ ಭಸ್ಮವಾಗಿದೆ. ರಾಜಸ್ಥಾನ ಮೂಲದ ವಿಕ್ಕಿ ಮತ್ತು ಸ್ನೇಹಿತರು ತಮಿಳುನಾಡಿನಲ್ಲಿ ಸ್ನೇಹಿತನ ಕಾರು ಪಡೆದು ರಾಜ್ಯ ಪ್ರವೇಶಿಸಿ ವ್ಯಾಪಾರದ ಹಿನ್ನೆಲೆಯಲ್ಲಿ ಮೈಸೂರಿಗೆ ತೆರಳುತ್ತಿದ್ದರು.
ಗಣಂಗೂರು ಬಳಿ ತಲುಪಿದಾಗ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಗೌಡಹಳ್ಳಿ ಗೇಟ್ ಬಳಿ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣವೇ ಕಾರಿನಲ್ಲಿದ್ದ ಮೂವರು ಕೆಳಗೆ ಇಳಿದಿದ್ದು, ಬೆಂಕಿಯ ಜ್ವಾಲೆ ಹೆಚ್ಚಾಗಿ ಕಾರು ಸಂಪೂರ್ಣ ಸುಟ್ಟುಹೋಗಿದೆ. ಕಾರಿನಲ್ಲಿದ್ದ ಎಲ್ಲರೂ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದು, ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದು, ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಕಾರು ಸಂಪೂರ್ಣ ಸುಟ್ಟುಹೋಗಿದೆ. ಶ್ರೀ ರಂಗಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ನೋಡಿ : ಎಂಜಿನ್ ಇಲ್ಲದೇ ಸಂಚರಿಸಿದ ಬೋಗಿಗಳು... ಎಂಜಿನ್ನಿಂದ ಬೇರ್ಪಟ್ಟಿದ್ದ ಗೂಡ್ಸ್ ಬೋಗಿಗಳು: ತಪ್ಪಿದ ಭಾರಿ ಅನಾಹುತ