ಬೈಕ್ಗೆ ಡಿಕ್ಕಿ ಹೊಡೆದು ಎಸ್ಕೇಪ್ ಆದ ಕಾರು: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು - ವಿಡಿಯೋ - ಕಾರು ಸ್ಕೂಟಿಗೆ ಡಿಕ್ಕಿ
🎬 Watch Now: Feature Video
Published : Dec 13, 2023, 11:19 AM IST
ಚಿಕ್ಕಮಗಳೂರು: ಓವರ್ ಟೆಕ್ ಮಾಡಲು ಹೋಗಿ ಅತ್ಯಂತ ವೇಗವಾಗಿ ಬಂದ ಕಾರು ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯಲ್ಲಿ ನಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟಿ ಹಾನಿಗೊಂಡಿದ್ದು, ಸವಾರನಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. 2 ದಿನದ ಹಿಂದೆ ಈ ಅಪಘಾತ ನಡೆದಿದೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತ ಮಾಡಿ ಪರಾರಿಯಾದ ಕಾರು ಚಾಲಕನ ಪತ್ತೆಗೆ ಶೋಧಕಾರ್ಯ ಮುಂದುವರಿಸಿದ್ದಾರೆ.
ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ: ವೇಗವಾಗಿ ಬಂದ ಕಾರೊಂದು ರಸ್ತೆ ಬದಿಯಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಕಳೆದ ಮೂರು ದಿನಗಳ ಹಿಂದೆ ದಾವಣಗೆರೆ ಹೊರವಲಯದ ಶಿರಮಗೊಂಡನಹಳ್ಳಿ ಬ್ರಿಡ್ಜ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿತ್ತು. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ಇದನ್ನೂ ಓದಿ: ತುಮಕೂರು: ತಿರುವು ಪಡೆಯುತ್ತಿದ್ದ ಬಸ್ಗೆ ವೇಗದಿಂದ ಬಂದು ಡಿಕ್ಕಿ ಹೊಡೆದ ಬೈಕ್- ವಿಡಿಯೋ