ಗ್ಯಾಸ್ ಸಿಲಿಂಡರ್ ಸ್ಫೋಟ.. ಆಂಧ್ರದಲ್ಲಿ 15 ಗುಡಿಸಲುಗಳು ಭಸ್ಮ; ಹೈದರಾಬಾದ್ನಲ್ಲಿ ಕುಟುಂಬವೊಂದನ್ನು ರಕ್ಷಿಸಿದ ಕಾನ್ಸ್ಟೇಬಲ್
🎬 Watch Now: Feature Video
Published : Dec 22, 2023, 10:28 AM IST
|Updated : Dec 22, 2023, 10:53 AM IST
ನಲ್ಲಜೆರ್ಲ(ಆಂಧ್ರಪ್ರದೇಶ): ಆಂಧ್ರಪ್ರದೇಶದ ಪೂರ್ವ ಗೋದಾವರಿಯ ನಲ್ಲಜೆರ್ಲ ಎಂಬಲ್ಲಿ ಗುರುವಾರ ರಾತ್ರಿ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯ ಜ್ವಾಲೆ ಸುತ್ತಮುತ್ತಲಿನ ಪ್ರದೇಶಗಳನ್ನು ಆವರಿಸಿ 15 ಗುಡಿಸಲುಗಳು ಸುಟ್ಟು ಕರಕಲಾಗಿವೆ. ಗುಡಿಸಲುಗಳಿಗೆ ಬೆಂಕಿ ಹೊತ್ತಿಕೊಂಡ ಬಳಿಕ ಮತ್ತೂ 3 ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡಿವೆ. ಹೀಗೆ ಒಟ್ಟು 15 ಗುಡಿಸಲು ಬೆಂಕಿಗೆ ಆಹುತಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.
ಹೈದರಾಬಾದ್: ಇನ್ನೊಂದೆಡೆ ಹೈದರಾಬಾದ್ನ ಪಂಜಗುಟ್ಟದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಆರನೇ ಮಹಡಿಯಲ್ಲಿ ಸಿಲುಕಿದ್ದ ಕುಟುಂಬವನ್ನು ಟ್ರಾಫಿಕ್ ಕಾನ್ಸ್ಟೇಬಲ್ ಬಾಗಿಲು ಒಡೆದು ಕಾಪಾಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುತ್ತಿದ್ದಾರೆ.
ಹಿಂದಿನ ಪ್ರಕರಣ: ಇದೇ ಡಿಸೆಂಬರ್ 14 ರಂದು ರಂಗಾ ರೆಡ್ಡಿ ಜಿಲ್ಲೆಯ ರಾಜೇಂದ್ರ ನಗರದ ಬೇಕರಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿದ್ದ. ಜತೆಗೆ 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಇದಕ್ಕೂ ಮುನ್ನ ನವೆಂಬರ್ ತಿಂಗಳಿನಲ್ಲಿ ವಿಜಯನಗರದಲ್ಲಿ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಮೂವರು ಮಕ್ಕಳು, ಇಬ್ಬರು ಮಹಿಳೆಯರು ಸೇರಿ ಮನೆಯ 5 ಮಂದಿ ಗಾಯಗೊಂಡಿದ್ದರು.
ಇದನ್ನೂ ಓದಿ : ದರೋಡೆಕೋರರು, ಪೊಲೀಸರ ಮಧ್ಯೆ ಗುಂಡಿನ ದಾಳಿ; ಇಬ್ಬರು ಆರೋಪಿಗಳ ಸೆರೆ