ಶಾಕಿಂಗ್..! ಹೆಬ್ಬಾವನ್ನೇ ನುಂಗಿತು ಕಾಳಿಂಗ ಸರ್ಪ- ಭಯಾನಕ ದೃಶ್ಯ ಮೊಬೈಲ್‌ನಲ್ಲಿ ಸೆರೆ - ಹೆಬ್ಬಾವನ್ನು ನುಂಗಿದ ಬೃಹತ್ ಗಾತ್ರದ ಕಾಳಿಂಗ ಸರ್ಪ
🎬 Watch Now: Feature Video
ಬೆಳ್ತಂಗಡಿ : ತಾಲೂಕಿನ ಅಳದಂಗಡಿ ಗ್ರಾಮದ ಪಿಲ್ಯ ಎಂಬಲ್ಲಿ ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪವು ಸುಮಾರು 9 ಅಡಿ ಉದ್ದದ ಹೆಬ್ಬಾವನ್ನು ನುಂಗಿರುವ ಈ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಹೆಬ್ಬಾವನ್ನು ನುಂಗಲು ಯತ್ನಿಸಿದ ಕಾಳಿಂಗ ಸರ್ಪ ಬಳಿಕ ಹೆಬ್ಬಾವನ್ನು ನುಂಗಲಾಗದೆ ತನ್ನ ಹೊಟ್ಟೆಯಿಂದ ಹೊರಹಾಕಿದೆ. ಈ ಬಗ್ಗೆ ಸ್ಥಳೀಯರು ವೇಣೂರು ಉಪವಲಯ ಅರಣ್ಯಾಧಿಕಾರಿ ಸುರೇಶ್ ಗೌಡರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಉರಗ ತಜ್ಞ ಬೆಳ್ತಂಗಡಿಯ ಸ್ನೇಕ್ ಅಶೋಕ್ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತವಾಗಿ ರಕ್ಷಿತಾರಣ್ಯಕ್ಕೆ ಬಿಟ್ಟಿದ್ದಾರೆ.
Last Updated : Feb 3, 2023, 8:22 PM IST