ಬಂಡಿಪೋರಾ: ಏರ್‌ಲಿಫ್ಟ್ ಮೂಲಕ ಅಸ್ವಸ್ಥ ವ್ಯಕ್ತಿ ಆಸ್ಪತ್ರೆಗೆ ದಾಖಲು - ಈಟಿವಿ ಭಾರತ ಕನ್ನಡ
🎬 Watch Now: Feature Video
ಬಂಡಿಪೋರಾ (ಜಮ್ಮು ಮತ್ತು ಕಾಶ್ಮೀರ): ಇಲ್ಲಿಯ ಗ್ರೆಜ್ ಎಂಬ ಗ್ರಾಮದಲ್ಲಿ ತೀವ್ರ ಅಸ್ವಸ್ಥರಾಗಿದ್ದ ವ್ಯಕ್ತಿಯೊಬ್ಬರನ್ನು ಏರ್‌ಲಿಫ್ಟ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಯಿತು. ಗ್ರಾಮದಲ್ಲಿ ಭಾರಿ ಹಿಮಪಾತವಾದ ಕಾರಣ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಸುಮಾರು 7 ರಿಂದ 8 ಅಡಿಗಳಷ್ಟು ಹಿಮ ಬಿದ್ದು ಸಾರಿಗೆ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಈ ವೇಳೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಅಸ್ವಸ್ಥರಾಗಿರುವ ಬಗ್ಗೆ ಜಿಲ್ಲಾಡಳಿತಕ್ಕೆ ಸ್ಥಳೀಯರು ಮಾಹಿತಿ ರವಾನಿಸಿದ್ದಾರೆ. ಏರ್‌ಲಿಫ್ಟ್ ಮೂಲಕ ಕಾರ್ಯಾಚರಣೆ ಕೈಗೊಂಡ ಜಿಲ್ಲಾಡಳಿತ ವ್ಯಕ್ತಿಯನ್ನು ಏರ್‌ಲಿಫ್ಟ್ ಮಾಡಿ ಬಂಡಿಪೋರಾ ಜಿಲ್ಲೆಯ ಆಸ್ಪತ್ರೆಗೆ ಸಾಗಿಸಿದೆ. ಜಿಲ್ಲಾಡಳಿತದ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಗರ್ಭಿಣಿಯ ಪ್ರಾಣ ಕಾಪಾಡಿದ ಭಾರತೀಯ ಸೇನೆ- ವಿಡಿಯೋ